ವಿಮಾನದಲ್ಲಿ ತಾಂತ್ರಿಕ ದೋಷ: ರಷ್ಯಾದಲ್ಲಿ ಸಿಲುಕಿದ ಪ್ರಯಾಣಿಕರ ಕರೆತರಲು ಕ್ರಮ

flaight
Published on

ಮುಂಬೈ: ದೆಹಲಿಯಿಂದ ಸ್ಯಾನ್ ಫ್ರಾನ್ಸಿಸ್ಕೋಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಗುರುವಾರ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ರಷ್ಯಾದ ಕ್ರಾಸ್ನೊಯಾರ್ಸ್ಕ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಲ್ಯಾಂಡ್ ಆಗಿದ್ದು, ಅವರನ್ನು ಸ್ಯಾನ್ ಫ್ರಾನ್ಸಿಸ್ಕೋಗೆ ಕರೆತರಲು ಏರ್ ಇಂಡಿಯಾ ಕ್ರಮಗಳನ್ನು ತೆಗೆದುಕೊಂಡಿದೆ.

ಹೀಗಾಗಿ, ಶುಕ್ರವಾರ ಮಧ್ಯಾಹ್ನ ಮುಂಬೈನ ಛತ್ರಪತಿ ಶಿವಾಜಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಏರ್ ಇಂಡಿಯಾ ವಿಮಾನ ರಷ್ಯಾಕ್ಕೆ ಹೊರಟಿದೆ. ಈ ಕುರಿತು ಸಂಸ್ಥೆಯ ಉನ್ನತ ಅಧಿಕಾರಿಗಳು ಶುಕ್ರವಾರ ಬಹಿರಂಗಪಡಿಸಿದ್ದಾರೆ.

ಗುರುವಾರ ನವದೆಹಲಿಯಿಂದ ಸ್ಯಾನ್ ಫ್ರಾನ್ಸಿಸ್ಕೋಗೆ ಹೊರಟಿದ್ದ ಬೋಯಿಂಗ್ 777 ವಿಮಾನದಲ್ಲಿ 225 ಪ್ರಯಾಣಿಕರು ಮತ್ತು 19 ಸಿಬ್ಬಂದಿ ಇದ್ದರು. ನಿಯಂತ್ರಕ ಅನುಮತಿ ದೊರೆತ ಕೂಡಲೇ ಮುಂಬೈನಿಂದ ವಿಮಾನ ಟೇಕ್ ಆಫ್ ಆಗಿದೆ ಎಂದು ಏರ್ ಇಂಡಿಯಾ ಬಹಿರಂಗಪಡಿಸಿದೆ. ಮತ್ತೊಂದೆಡೆ ತಾಂತ್ರಿಕ ದೋಷದಿಂದ ಏರ್ ಇಂಡಿಯಾ ವಿಮಾನ ರಷ್ಯಾದ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಿದೆ.

ರಷ್ಯಾದ ರಾಜಧಾನಿ ಮಾಸ್ಕೋದಲ್ಲಿರುವ ಭಾರತದ ರಾಯಭಾರ ಕಚೇರಿ ಶುಕ್ರವಾರ ಈ ಘಟನೆಗೆ ಪ್ರತಿಕ್ರಿಯಿಸಿದೆ. ಮೂವರು ಅಧಿಕಾರಿಗಳು ಪ್ರಯಾಣಿಕರಿಗಾಗಿ ಮೈದಾನಕ್ಕಿಳಿದ್ದಾರೆ ಎಂದು ಅದು ಹೇಳಿದೆ. ಪ್ರಯಾಣಿಕರ ಸುರಕ್ಷತೆ ಹಾಗೂ ಸ್ಥಳೀಯವಾಗಿ ತಂಗಲು ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದೆ. ಅದಕ್ಕಾಗಿ ರಷ್ಯಾದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಅಧಿಕಾರಿಗಳೊಂದಿಗೆ ಮಾತನಾಡಿರುವುದಾಗಿ ವಿವರಿಸಿದೆ. ಈ ಪ್ರಯಾಣಿಕರು ರಷ್ಯಾದಿಂದ ಸ್ಯಾನ್ ಫ್ರಾನ್ಸಿಸ್ಕೋಗೆ ತೆರಳುವವರೆಗೆ ಇಲ್ಲಿಯೇ ಇರಲು ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ಮಾಸ್ಕೋದಲ್ಲಿರುವ ಭಾರತೀಯ ರಾಯಭಾರ ಕಚೇರಿ ವಿವರಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net