ಪ್ರಮುಖ ಮುಖ್ಯಾಂಶಗಳು
ಕೊಡಗಿನಲ್ಲಿ ಮಿನಿ ವಿಮಾನ ನಿಲ್ದಾಣಕ್ಕಾಗಿ ಕುಶಾಲನಗರ ಸಮೀಪದ ಚಿಕ್ಕ ಅಳುವಾರದಲ್ಲಿ ಜಾಗ ಗುರುತಿಸಿದ್ದರೂ ಅದು ಸೂಕ್ತವಲ್ಲ ಎಂದು ವರದಿ ಬಂದಿದೆ. ಹಾಗಾಗಿ ಮಡಿಕೇರಿ ಸಮೀಪ ಸಮತಟ್ಟು ಪ್ರದೇಶ ಲಭ್ಯವಾದಲ್ಲಿ ಅದನ್ನು ಸರ್ಕಾರ ಮಾರುಕಟ್ಟೆ ದರದಲ್ಲಿ ಖರೀದಿಸಿ, ವಿಮಾನ ನಿಲ್ದಾಣ ನಿರ್ಮಿಸಲು ಚಿಂತನೆ ನಡೆಸಿದೆ. ಜಿಲ್ಲೆಯಲ್ಲಿ ನಾಲ್ಕು ಕಡೆ ಹೆಲಿಪೋರ್ಟ್ ಸ್ಥಾಪನೆಗೂ ಸರ್ಕಾರ ಮುಂದಾಗಿದೆ.
ಜಿಲ್ಲೆಯ 7 ಕಡೆಗಳಲ್ಲಿ ಅಧ್ಯಯನ ನಡೆಸಿ ಕೊನೆಗೆ ಕೂಡಿಗೆ ಕೃಷಿ ಫಾರಂ ಜಾಗವನ್ನು ಮಿನಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಆಯ್ಕೆ ಮಾಡಿಕೊಳ್ಳಲಾಗಿತ್ತು. ಬೇಕಾಗುವ ಜಾಗವನ್ನೂ ಗುರುತು ಮಾಡಲಾಗಿತ್ತು. ಇಲ್ಲಿ ವಿಮಾನ ನಿಲ್ದಾಣ ಆದರೆ ವರ್ಷದಲ್ಲಿ ಕನಿಷ್ಠ 9 ತಿಂಗಳು ವಿಮಾನಗಳು ಕಾರ್ಯಾಚರಣೆ ನಡೆಸಬಹುದು. ಆದರೆ ವರ್ಷದ ಎಲ್ಲಾ ಕಾಲದಲ್ಲೂ ಮಂಜು ಕವಿದಿರುವ ಬೆಟ್ಟ ಗುಡ್ಡಗಳಿಂದ ಆವೃತ್ತವಾಗಿರುವ ಮಡಿಕೇರಿಯಲ್ಲಿ ಮಿನಿ ವಿಮಾನ ನಿಲ್ದಾಣ ಎಷ್ಟರ ಮಟ್ಟಿಗೆ ಕಾರ್ಯಸಾಧುವಾಗುತ್ತದೆ ? ಇದು ಕೇವಲ ಯೋಜನೆಯನ್ನು ವಿನಾಕಾರಣ ವಿಳಂಬ ಮಾಡುವ ಚಿಂತನೆಯಷ್ಟೇ