

ಪಾಕಿಸ್ತಾನ: ಕರಾಚಿ ವಿಮಾನ ನಿಲ್ದಾಣದ ಹೊರಗೆ ದೊಡ್ಡ ಸ್ಫೋಟ ( Airport Explosion ) ಸಂಭವಿಸಿದೆ. ಇಬ್ಬರು ಚೀನಾ ಪ್ರಜೆಗಳು ಸಾವನ್ನಪ್ಪಿದ್ದಾರೆ.
ಭಾನುವಾರ ರಾತ್ರಿ ಸುಮಾರು 11 ಗಂಟೆಗೆ ಸ್ಫೋಟ ಸಂಭವಿಸಿದೆ. ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ದಟ್ಟ ಹೊಗೆ ಆವರಿಸಿತ್ತು. ಅಪಘಾತದ ಸ್ಥಳದಲ್ಲಿ ಭಾರೀ ಸೇನಾಪಡೆ ನಿಯೋಜಿಸಲಾಗಿದೆ. 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಮತ್ತು ಗಾಯಗೊಂಡವರ ಸಂಖ್ಯೆ ಇನ್ನೂ ಹೆಚ್ಚಾಗಬಹುದು. ಎಲ್ಲಾ ಗಾಯಾಳುಗಳನ್ನು ಚಿಕಿತ್ಸೆಗಾಗಿ ಜಿನ್ನಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಿಂಧ್ ಪ್ರಾಂತೀಯ ಗೃಹ ಸಚಿವ ಜಿಯಾ ಉಲ್ ಹಸನ್ ಲಾಂಜಾರ್ ಅವರು ಸ್ಫೋಟಕ್ಕೆ ಸುಧಾರಿತ ಸ್ಫೋಟಕ ಸಾಧನವನ್ನು (ಐಇಡಿ) ಬಳಸಿರುವ ಶಂಕೆ ವ್ಯಕ್ತಪಡಿಸಿದ್ದಾರೆ. ನಗರದ ಹಲವು ಪ್ರದೇಶಗಳಲ್ಲಿ ಸ್ಫೋಟದ ಸದ್ದು ಕೇಳಿಬಂದಿದೆ ಎಂದು ಜಿಯೋ ನ್ಯೂಸ್ ವರದಿ ಮಾಡಿದೆ.