ವಿಮಾನ ನಿಲ್ದಾಣ ಉದ್ಘಾಟನೆಗೆ ಕ್ಷಣಗಣನೆ

26 smg airport 2
Published on

ಶಿವಮೊಗ್ಗ: ಸೋಗಾನೆಯಲ್ಲಿ ನೂತನ ವಿಮಾನ ನಿಲ್ದಾಣ ಉದ್ಘಾಟನೆಗೆ ಕ್ಷಣಗಣನೆ ಶುರುವಾಗಿದೆ. ವಿಮಾನ ನಿಲ್ದಾಣದೊಂದಿಗೆ ಇತರೆ ಯೋಜನೆಗಳ ಕಾಮಗಾರಿಗಳ ಲೋಕಾರ್ಪಣೆ ಮತ್ತು ಶಂಕುಸ್ಥಾಪನೆ ಕಾಮಗಾರಿಗಳ ಲೋಕಾರ್ಪಣೆಗೆ ಸರ್ವ ರೀತಿಯಲ್ಲಿ ಸಿದ್ಧತೆ ನಡೆದಿದ್ದು, ಇಡೀ ನಗರವೇ ಪ್ರಧಾನಿ ನರೇಂದ್ರ ಮೋದಿ ಅವರ ಸ್ವಾಗತಕ್ಕಾಗಿ ಸಿಂಗಾರಗೊಂಡಿದೆ.

ಪ್ರಧಾನಿ ಅವರ ಕಾರ್ಯಕ್ರಮಕ್ಕೆ ಒಂದು ಲಕ್ಷ ಜನರಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ. 2 ಕಡೆ ಊಟದ ವ್ಯವಸ್ಥೆ ಇದ್ದು ಒಂದೊಂದು ಕಡೆ 100 ಕೌಂಟರ್ ತೆರೆಯಲಾಗಿದೆ. ಕಾರ್ಯಕ್ರಮದ ವೀಕ್ಷಣೆಗೆ 4 ಕಡೆ ವಿಶಾಲವಾದ ಪ್ರಾಜೆಕ್ಟರ್‌ಗಳ ವ್ಯವಸ್ಥೆ ಮಾಡಲಾಗಿದೆ. ಬೆಳಗ್ಗೆ ಉಪಾಹಾರಕ್ಕೆ ಬೇಳೆಬಾತು ಮತ್ತು ಮೈಸೂರುಪಾಕ್ ನೀಡಲಾಗುತ್ತದೆ. ಮಧ್ಯಾಹ್ನ ಪಲಾವ್, ಮೊಸರನ್ನ ಮತ್ತು ಪಾಯಸ ವ್ಯವಸ್ಥೆ ಮಾಡಲಾಗಿದೆ.

ಏರ್‌ಪೋರ್ಟ್‌ವರೆಗೆ ಶೂನ್ಯ ಸಂಚಾರ ರಸ್ತೆ: ಫೆ.27ರ ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಎಂ.ಆರ್.ಎಸ್ ಸರ್ಕಲ್ನಿಂದ ಎನ್.ಆರ್.ಪುರ ರಸ್ತೆ ಲಕ್ಕಿನಕೊಪ್ಪ ಸರ್ಕಲ್ವರೆಗೆ, ಮತ್ತೂರು-ಮಂಡೇನಕೊಪ್ಪ-ಸೋಗಾನೆ ವಿಮಾನ ನಿಲ್ದಾಣದವರೆಗೆ ಶೂನ್ಯ ಸಂಚಾರ ರಸ್ತೆ ಎಂದು ಅಧಿಸೂಚನೆ ಹೊರಡಿಸಲಾಗಿದೆ. ಅಂದು ಸಾರ್ವಜನಿಕ ವಾಹನ ಮಾರ್ಗ ಬದಲಾವಣೆ ಮಾಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net