ಏರ್‌ಪೋರ್ಟ್ ಸರ್ವೀಸಸ್ ಲಿಮಿಟೆಡ್‌ನಲ್ಲಿ ಉದ್ಯೋಗ; ಮಾ.1, 2ರಂದು ನೇರ ಸಂದರ್ಶನ

Job
Published on

ಬೆಂಗಳೂರು: ಏರ್ ಇಂಡಿಯಾ ಏರ್‌ಪೋರ್ಟ್ ಸರ್ವೀಸಸ್ ಲಿಮಿಟೆಡ್ ಭಾರತದ ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ಗ್ರೌಂಡ್ ಹ್ಯಾಂಡ್ಲಿಂಗ್ ಸೇವೆಗಳನ್ನು ಒದಗಿಸುವ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ 82 ವಿಮಾನ ನಿಲ್ದಾಣಗಳಲ್ಲಿ ಗ್ರೌಂಡ್ ಹ್ಯಾಂಡ್ಲಿಂಗ್ ಸೇವೆಗಳನ್ನು ಒದಗಿಸುತ್ತಿದೆ. ಸದ್ಯ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ನೇರಸಂದರ್ಶನಕ್ಕೆ ಹಾಜರಾಗಬಹುದು.

ಒಟ್ಟು ಹುದ್ದೆ: 79

ಹುದ್ದೆಯ ಹೆಸರು
ರಾಂಪ್ ಸರ್ವಿಸ್ ಎಕ್ಸಿಕ್ಯೂಟಿವ್ 6
ಯುಟಿಲಿಟಿ ಏಜೆಂಟ್/ರಾಂಪ್ ಡ್ರೈವರ್ 25
ಹ್ಯಾಂಡಿಮನ್ 48

ವಿದ್ಯಾರ್ಹತೆ
ಅಭ್ಯರ್ಥಿಗಳು ಎನ್‌ಸಿಟಿವಿಟಿಯೊಂದಿಗೆ ಎಸ್‌ಎಸ್‌ಸಿ/10ನೇ ತರಗತಿ ಅಥವಾ ಡಿಪ್ಲೊಮಾ/ಐಟಿಐ ಪೂರ್ಣಗೊಳಿಸಿರಬೇಕು.

ವಯೋಮಿತಿ, ವೇತನ
ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಗರಿಷ್ಠ ವಯಸ್ಸು 28ವರ್ಷದೊಳಗಿರಬೇಕು. ಎಸ್ಸಿ/ಎಸ್ಟಿ ಅಭ್ಯರ್ಥಿಗಳಗೆ 5ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3ವರ್ಷ ವಯೋಸಡಿಲಿಕೆ ಅನ್ವಯವಾಗಲಿದೆ. ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಕನಿಷ್ಠ 18,840ರೂ. ಮತ್ತು ಗರಿಷ್ಠ 24,960ರೂ. ಮಾಸಿಕ ವೇತನ ನಿಗದಿಪಡಿಸಲಾಗಿದೆ.

ಆಯ್ಕೆ ಪ್ರಕ್ರಿಯೆ
ಆಯ್ಕೆ ಪ್ರಕ್ರಿಯೆಯು ನೇರಸಂದರ್ಶನವನ್ನು ಆಧರಿಸಿದೆ.

ಅರ್ಜಿ ಶುಲ್ಕ
ಮಾಜಿ ಸೈನಿಕರು/ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಇತರ ಎಲ್ಲ ಅಭ್ಯರ್ಥಿಗಳಿಗೆ 500ರೂ. ಶುಲ್ಕ ನಿಗದಿಪಡಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
aiasl.in

ಸಂದರ್ಶನ ನಡೆಯುವ ದಿನ
1-03-2024
2-03-2024 

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net