ಇಡಿ ಕ್ರಮ ಪ್ರಶ್ನಿಸಿ ಐಶ್ವರ್ಯ ಗೌಡ ಅರ್ಜಿ: ವಿಚಾರಣೆ ಮುಂದೂಡಿದ ಹೈಕೋರ್ಟ್

highcourt
Published on

ಬೆಂಗಳೂರು:  ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ತಮ್ಮನ್ನು ಬಂಧಿಸಿರುವ ಜಾರಿ ನಿರ್ದೇಶನಾಲಯದ (ಇಡಿ) ಕ್ರಮಕ್ಕೆ ಆಕ್ಷೇಪ ವ್ಯಕ್ತಪಡಿಸಿ ಐಶ್ವರ್ಯ ಗೌಡ ಸಲ್ಲಿಸಿದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮೇ 22 ಕ್ಕೆ ಮುಂದೂಡಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ ಬಂಧನಕ್ಕೆ ಸೂಕ್ತ ಕಾರಣ ನೀಡಿಲ್ಲ. ಹೀಗಾಗಿ ನ್ಯಾಯಾಂಗ ಬಂಧನದಿಂದ ಮುಕ್ತಗೊಳಿಸುವಂತೆ ಮನವಿ ಮಾಡಿದರು.

ಈ ವೇಳೆ ಜಾರಿ ನಿರ್ದೇಶನಾಲಯದ ಪರ ಹಾಜರಿದ್ದ ವಕೀಲರು ಆಕ್ಷೇಪಣೆ ಸಲ್ಲಿಸಲು ಸಮಯಾವಕಾಶ ಕೋರಿದರು.

ಇದನ್ನು ಪರಿಗಣಿಸಿದ ನ್ಯಾಯಾಪೀಠ ವಿಚಾರಣೆಯನ್ನು ಮೇ.22 ಕ್ಕೆ ಮುಂದೂಡಿದೆ

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಹೋದರಿ ಎಂದು ಹೇಳಿಕೊಂಡು ಹಲವರಿಗೆ ಕೋಟ್ಯಂತರ ರೂಪಾಯಿ ಹಾಗೂ ಚಿನ್ನಾಭರಣ ಮೋಸ ಮಾಡಿರುವ ಆರೋಪವನ್ನು ಐಶ್ವರ್ಯ ಗೌಡ ಎದುರಿಸುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net