

ಜಮ್ಮು-ಕಾಶ್ಮೀರ: ಇಲ್ಲಿನ ಅನಂತನಾಗ್ ಜಿಲ್ಲೆಯಲ್ಲಿ ನಿವೃತ್ತ ಸರ್ಕಾರಿ ವೈದ್ಯನ ಮನೆಯಲ್ಲಿ AK-47 ರೈಫಲ್ ಪತ್ತೆಯಾಗಿದ್ದು, ಇಡೀ ಶ್ರೀನಗರವನ್ನೇ ಬೆಚ್ಚಿಬಿಳಿಸಿದೆ.
ವೈದ್ಯ ಅದೀಲ್ ಅಹ್ಮದ್ ರಾಥರ್ ಎಂದು ಗುರುತಿಸಲಾಗಿದೆ. ಆರೋಪಿಯನ್ನು ಬಂಧಿಸಿದ್ದು, ಪೊಲೀಸರು ನೌಗಮ್ ಪೊಲೀಸ್ ಠಾಣೆಯಲ್ಲಿ ಭಾರತೀಯ ಶಸ್ತ್ರಾಸ್ತ್ರ ಕಾಯ್ದೆ ಮತ್ತು ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಅದಿಲ್ 2024 ಅಕ್ಟೋಬರ್ 23ರ ವರೆಗೆ ಜಿಎಂಸಿ ಅನಂತ್‌ನಾಗ್‌ನಲ್ಲಿ ಸೇವೆ ಸಲ್ಲಿಸಿದರು. ಅವರು ಅನಂತ್‌ನಾಗ್‌ನ ಜಲಗುಂಡ್ ನಿವಾಸಿಯಾಗಿದ್ದಾರೆ.ಆದಿಲ್ ಅಹ್ಮದ್ ರಾಥರ್ ವಿರುದ್ಧ ಅಂತಹ ಆಯುಧವನ್ನು ಹೊಂದಿದ್ದಕ್ಕಾಗಿ ಮತ್ತು ಭಯೋತ್ಪಾದಕ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಸಾಧ್ಯತೆಯ ಮೇಲೆ ಪ್ರಕರಣ ದಾಖಲಿಸಲಾಗಿದೆ.
ಆತನ ಬಳಿಯಿಂದ ವಶಪಡಿಸಿಕೊಂಡ ಶಸ್ತ್ರಾಸ್ತ್ರಗಳು ಮತ್ತು ಇತರ ಪುರಾವೆಗಳನ್ನು ಪರಿಶೀಲಿಸುತ್ತಾರೆ ಮತ್ತು ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತಾರೆ ಎಂದು ಪೊಲೀಸರು ತಿಳಿಸಿದ್ದಾರೆ. (ಏಜೆನ್ಸೀಸ್)