ಭಾರತ್ ಜೋಡೋ ನ್ಯಾಯ್ ಯಾತ್ರೆಯಲ್ಲಿ ರಾಹುಲ್ ಗಾಂಧಿಗೆ ಅಖಿಲೇಶ್ ಸಾಥ್​

jodo yathre
Published on

ಆಗ್ರಾ(ಉತ್ತರ ಪ್ರದೇಶ): ಲೋಕಸಭೆ ಚುನಾವಣೆಗೆ ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್​ ಮತ್ತು ಸಮಾಜವಾದಿ ಪಕ್ಷ ಸೀಟು ಹಂಚಿಕೆ ಮಾಡಿಕೊಂಡ ನಂತರ ಎಸ್ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಭಾನುವಾರ ಆಗ್ರಾದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ 'ಭಾರತ್ ಜೋಡೋ ನ್ಯಾಯ್ ಯಾತ್ರೆ'ಯಲ್ಲಿ ಪಾಲ್ಗೊಂಡರು.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ಇಬ್ಬರು ನಾಯಕರು ಯಾತ್ರೆಯಲ್ಲಿ ನೆರೆದಿದ್ದ ಜನಸಮೂಹದತ್ತ ಕೈಬೀಸುತ್ತಿದ್ದಂತೆ ಎಸ್‌ಪಿ ಮತ್ತು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಜೈಕಾರ ಹಾಕಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅಖಿಲೇಶ್ ಯಾದವ್​, ‘ರೈತರು ಸರ್ಕಾರದ ವಿರುದ್ಧ ನಿಂತಿದ್ದಾರೆ, ಸರ್ಕಾರ ರೈತರ ಶಕ್ತಿಗೆ ಹೆದರುತ್ತಿದೆ. ಬಿಜೆಪಿಯನ್ನು ಈ ಬಾರಿ ಸೋಲಿಸಲಾಗುವುದು, ಅಷ್ಟೇ ಅಲ್ಲ, ಮುಂದೆ ಬರುವ INDIA ಸಮ್ಮಿಶ್ರ ಸರ್ಕಾರವು ರೈತರಿಗೆ ಗೌರವವನ್ನು ನೀಡುತ್ತದೆ. ಹಿಂದುಳಿದ ವರ್ಗಗಳು, ದಲಿತರು ಮತ್ತು ಅಲ್ಪಸಂಖ್ಯಾತರಿಗೆ ನೀಡಬೇಕಾದ ಗೌರವವನ್ನು ಬಿಜೆಪಿ ನೀಡಿಲ್ಲ ಎಂದು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು.

ಈ ಸಂದರ್ಭದಲ್ಲಿ ಉತ್ತರ ಪ್ರದೇಶದ ಹಿರಿಯ ಕಾಂಗ್ರೆಸ್ ನಾಯಕ ಪ್ರದೀಪ್ ಮಾಥೂರ್ ಉಪಸ್ಥಿತರಿದ್ದರು. ಇದಕ್ಕೂ ಮುನ್ನ ಆಗ್ರಾದ ಬಿಆರ್ ಅಂಬೇಡ್ಕರ್ ಪ್ರತಿಮೆಗೆ ಮುಖಂಡರು ಪುಷ್ಪ ನಮನ ಸಲ್ಲಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net