ನೂತನ ಅಧ್ಯಕ್ಷ ನಂಜುಂಡಸ್ವಾವಿ

11NGD1
Published on

ನಂಜನಗೂಡು: ತಾಲೂಕಿನ ಆಲತ್ತೂರು ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ನಂಜುಂಡಸ್ವಾಮಿ ಹಾಗೂ ಉಪಾಧ್ಯಕ್ಷರಾಗಿ ಮಾದಯ್ಯನ ಹುಂಡಿ ಪ್ರಕಾಶ್ ಅವಿರೋಧವಾಗಿ ಆಯ್ಕೆಯಾದರು.

ಸಂಘದ ಕಚೇರಿಯಲ್ಲಿ ಗುರುವಾರ ಚುನಾವಣಾಧಿಕಾರಿ ಪ್ರಸಾದ್ ನೇತೃತ್ವದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ನೂತನ ಅಧ್ಯಕ್ಷ-ಉಪಾಧ್ಯಕ್ಷರು ಅವಿರೋಧವಾಗಿ ಆಯ್ಕೆಯಾದರು. ನೂತನ ಅಧ್ಯಕ್ಷ ನಂಜುಂಡಸ್ವಾಮಿ ಮಾತನಾಡಿ, ಹಾಲು ಉತ್ಪಾದಕರು ಗುಣಮಟ್ಟದ ಹಾಲನ್ನು ಸಂಘಕ್ಕೆ ಪೂರೈಸುವ ಮೂಲಕ ಆರ್ಥಿಕವಾಗಿ ಲಾಭ ಗಳಿಸುವ ಜತೆಗೆ ಸಂಘದ ಅಭಿವೃದ್ಧಿಗೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಸಂಘದ ಕಾರ್ಯದರ್ಶಿ ಪುಟ್ಟಸ್ವಾಮಿ, ಗೌಡಿಕೆ ಸಿದ್ದಲಿಂಗಪ್ಪ ಸೇರಿದಂತೆ ಸಂಘದ ಸದಸ್ಯರು ಹಾಗೂ ಗ್ರಾಮಸ್ಥರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net