ನಮ್ಮ ಸಿದ್ದಾಂತಕ್ಕೆ ವಿಶ್ವದಾದ್ಯಂತ ಹೆಚ್ಚಿನ ಬೇಡಿಕೆ ಇದೆ: ಮೋಹನ್​ ಭಾಗವತ್​

Mohan Bhagawat
Published on

ಮುಂಬೈ: ಭಾರತ ಹಿಂದೂ ರಾಷ್ಟ್ರವಾಗಿದ್ದು, ಎಲ್ಲಾ ಭಾರತೀಯರು ಹಿಂದೂಗಳನ್ನು ಪ್ರತಿನಿಧಿಸುತ್ತಾರೆ. ಹಿಂದೂಗಳೆಲ್ಲಾ ಭಾರತೀಯರನ್ನು ಪ್ರತಿನಿಧಿಸುತ್ತಾರೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥ ಮೋಹನ್​ ಭಾಗವತ್​ ಹೇಳಿದ್ದಾರೆ.

ಮುಂಬೈನಲ್ಲಿ ದೈನಿಕ್​ ತರುಣ್​ ಭಾರತ್​ ಪತ್ರಿಕೆಯ ಮಧುಕರ್​ ಭವನವನ್ನು ಉದ್ಘಾಟಿಸಿ ಮಾತನಾಡಿದ ಮೋಹನ್​ ಭಾಗವತ್​ ನಮ್ಮ ಸಿದ್ದಾಂತಕ್ಕೆ ವಿಶ್ವದಾದ್ಯಂತ ಹೆಚ್ಚ್ಚಿನ ಬೇಡಿಕೆ ಇದೆ ಎಂದಿದ್ದಾರೆ.

ಭಾರತ ಹಿಂದೂ ರಾಷ್ಟ್ರ ಮತ್ತು ಈ ವಿಚಾರ ಸತ್ಯ. ಸೈದ್ಧಾಂತಿಕವಾಗಿ ಎಲ್ಲಾ ಭಾರತೀಯರು ಹಿಂದೂಗಳು ಮತ್ತು ಹಿಂದೂಗಳೆಂದರೆ ಎಲ್ಲಾ ಭಾರತೀಯರು. ಇಂದು ಭಾರತದಲ್ಲಿರುವವರು ಹಿಂದೂ ಭೂಮಿ ಮತ್ತು ಸಂಸ್ಕೃತಿಗೆ ಸಂಬಂಧಿಸಿದವರು. ಇವುಗಳನ್ನೂ ಹೊರತುಪಡಿಸಿ ಬೇರೇನು ಇಲ್ಲ.

ಕೆಲವರು ಈ ವಿಚಾರಗಳನ್ನು ಅರ್ಥ ಮಾಡಿಕೊಂಡಿದ್ದಾರೆ. ಇನ್ನೂ ಕೆಲವರು ಈ ಮನಸ್ಥಿತಿಯನ್ನು ಅಳವಡಿಸಿಕೊಂಡಿಲ್ಲ. ಆದರೆ, ಅವರಿಗೆ ಈ ವಿಚಾರ ಸಂಪೂರ್ಣವಾಗಿ ಅರ್ಥವಾಗಿದೆ. ಇಷ್ಟಾದರೂ ತಮ್ಮ ಹವ್ಯಾಸ ಹಾಗೂ ಸ್ವಾರ್ಥದಿಂದಾಗಿ ಈ ವಿಚಾರವನ್ನು ಒಪ್ಪಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಇನ್ನೂ ಕೆಲವರಂತೂ ಈ ವಿಚಾರವನ್ನು ಅರ್ಥವನ್ನೂ ಮಾಡಿಕೊಂಡಿಲ್ಲ, ಬದಲಾಗಿ ಮರೆತೂ ಹೋಗಿದ್ದಾರೆ.

ನಾವೆಲ್ಲರೂ ಈ ವಿಚಾರವನ್ನು ಅರ್ಥ ಮಾಡಿಕೊಂಡಿದ್ದೇವೆ. ಕೆಲವರು ಈ ವಿಚಾರವನ್ನು ಒಪ್ಪಿಕೊಂಡಿದ್ಧಾರೆ. ಇನ್ನು ಕೆಲವರು ಒಪ್ಪಿಕೊಂಡಿಲ್ಲ. ನಮ್ಮ ಸಿದ್ದಾಂತಕ್ಕೆ ಪ್ರಪಂಚದಾದ್ಯಂತ ಹೆಚ್ಚಿನ ಬೇಡಿಕೆಯಿದ್ದು, ಇದಕ್ಕೆ ಪರ್ಯಾಯವಾಗಿ ಬೇರೊಂದಿಲ್ಲ ಎಂದು ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್​ ಭಾಗವತ್​ ಕಾರ್ಯಕ್ರಮ ಒಂದರಲ್ಲಿ ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net