

Support : ಜಮ್ಮು-ಕಾಶ್ಮೀರದ ಪಹಲ್ಗಾಮ್ನಲ್ಲಿ ಏ.22ರಂದು ನಡೆದ ಭಯೋತ್ಪಾದಕರ ದಾಳಿ ವಿರುದ್ಧ ಕೇಂದ್ರ ಸರ್ಕಾರ ಯಾವುದೇ ಕ್ರಮಕೈಗೊ0ಡರು ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ಲೋಕಸಭೆ ವಿರೋಧ ಪಕ್ಷ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ದೆಹಲಿಯಲ್ಲಿ ನಡೆದ ಸರ್ವಪಕ್ಷ ಸಭೆ ಬಳಿಕ ಮಾತನಾಡಿದರು. "ಎಲ್ಲಾ ರಾಜಕೀಯ ಪಕ್ಷಗಳು ಇದನ್ನು ಏಕರೂಪವಾಗಿ ಖಂಡಿಸಿವೆ. ಅಲ್ಲದೆ,ಸರ್ಕಾರ ಯಾವುದೇ ಕ್ರಮಕೈಗೊಂಡರು ಬೆಂಬಲ ಇದೆ'' ಎಂದರು.
ಇನ್ನು ಈ ಬಗ್ಗೆ ಬಳಿಕ ಮಾತನಾಡಿದ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ, ''ಜಮ್ಮು ಮತ್ತು ಕಾಶ್ಮೀರದಲ್ಲಿ ಸಾಧ್ಯವಾದಷ್ಟು ಬೇಗ ಶಾಂತಿ ಪುನಃಸ್ಥಾಪಿಸಬೇಕೆಂದು ನಾವು ಬಯಸುತ್ತೇವೆ" ಎಂದು ಹೇಳಿದರು.
ಸರ್ವಪಕ್ಷ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು,ಎಲ್ಲಾ ಪಕ್ಷಗಳು ಈ ವಿಷಯದ ಬಗ್ಗೆ ತಮ್ಮ ಅಭಿಪ್ರಾಯ ಮತ್ತು ಕಳವಳವನ್ನು ವ್ಯಕ್ತಪಡಿಸಿದ್ದು, ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಸರ್ಕಾರದೊಂದಿಗೆ ಒಗ್ಗಟ್ಟಿನಿಂದ ನಿಲ್ಲುತ್ತೇವೆ ಎಂದು ಎಲ್ಲಾ ಪಕ್ಷಗಳು ಬೆಂಬಲ ವ್ಯಕ್ತಪಡಿಸಿವೆ ಎಂದು ಹೇಳಿದ್ದಾರೆ.(ಏಜೆನ್ಸೀಸ್)