ಜಾತಿ ನಿಂದನೆಯ ಆರೋಪ

Crime Logo
Published on

ಬೆಂಗಳೂರು: ಇಂಡಿಯನ್ ಇನ್‌ಸ್ಟಿಟ್ಯೂಟ್ ಆ್ ಮ್ಯಾನೇಜ್ಮೆಂಟ್ ಬೆಂಗಳೂರು (ಐಐಎಂಬಿ) ಸಂಸ್ಥೆಯಲ್ಲಿ ಕೆಲಸ ಮಾಡುತ್ತಿರುವ ಪ್ರಾಧ್ಯಾಪಕನಿಗೆ ಜಾತಿ ನಿಂದನೆ ಮಾಡಿರುವ ಆರೋಪ ಕೇಳಿ ಬಂದಿದ್ದು, ಈ ಸಬಂಧ ಸಹದ್ಯೋಗಿಗಳ ವಿರುದ್ಧ ಮೈಕೋಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಿಳೇಕನಹಳ್ಳಿಯಲ್ಲಿರುವ ಐಎಂಎಬಿ ಸಂಸ್ಥೆಯ ಮಾರ್ಕೆಟಿಂಗ್ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಹಾಯಕ ಪ್ರಾಧ್ಯಾಪಕ ಗೋಪಾಲ್ ದಾಸ್ ನೀಡಿದ ದೂರಿನ ಮೇರೆಗೆ ಪ್ರೊಫೆಸರ್ ಹಾಗೂ ಡೀನ್ ರಿಷಿಕೇಶ್ ಟಿ.ಕೃಷ್ಣನ್, ಸಹದ್ಯೋಗಿಗಳಾದ ದಿನೇಶ್ ಕುಮಾರ್, ಸೈನೇಶ್, ಶ್ರೀನಿವಾಸ ಪ್ರಕ್ಯಾ, ಚೇತನ್ ಸುಬ್ರಮಣ್ಯನ್, ಆಶಿಶ್ ಮಿಶ್ರಾ ಸೇರಿದಂತೆ ೮ ಮಂದಿ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇವರು ಉದ್ದೇಶಪೂರ್ವಕವಾಗಿ ನನ್ನ ಜಾತಿಯನ್ನು ಬಹಿರಂಗ ಪಡಿಸಿ ಪ್ರಚಾರ ಮಾಡುತ್ತಿದ್ದಾರೆ. ಕೆಲಸ ಮಾಡುವ ವಾತಾವರಣದಲ್ಲಿ ಸಮಾನ ಅವಕಾಶ ನೀಡದೇ ಜಾತಿ ಭೇದ ಮಾಡಿ ವೈಷಮ್ಯ ಮೂಡಿಸಿದ್ದಾರೆ. ಕೆಲಸ ಮಾಡಲು ಅಡಚಣೆ ನೀಡಿ ಬೆದರಿಕೆ ಹಾಕುವ ಮೂಲಕ ಮಾನಸಿಕ ಹಿಂಸೆ ನೀಡಿದ್ದಾರೆ ಎಂದು ಗೋಪಾಲ್ ದಾಸ್ ದೂರಿನಲ್ಲಿ ಆರೋಪಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net