

ಬೆಂಗಳೂರು : ಪತ್ನಿಯ ಕ್ರೌರ್ಯದ ಆಧಾರದಲ್ಲಿ ಪತಿ ಮೊದಲ ಬಾರಿ ಸಲ್ಲಿಸಿದ್ದ ವಿವಾಹ ವಿಚ್ಛೇದನ ಅರ್ಜಿ ತಿರಸ್ಕೃತಗೊಂಡಿದ್ದರೆ, ಎರಡನೇ ಸಲ ಅರ್ಜಿ ಸಲ್ಲಿಸಲು ಕಾನೂನಿನಲ್ಲಿ ಯಾವುದೇ ನಿರ್ಬಂಧವಿಲ್ಲ ಎಂದು ಹೈಕೋರ್ಟ್ ಹೇಳಿದೆ. ಅಲ್ಲದೆ ಮೊದಲನೇ ವಿಚ್ಛೇದನ ಅರ್ಜಿ ತಿರಸ್ಕೃತಗೊಂಡ ನಂತರ ಸಲ್ಲಿಸಿದ್ದ ಎರಡನೇ ಅರ್ಜಿ ಪುರಸ್ಕರಿಸಿರುವ ನ್ಯಾಯಾಲಯ, ವಿಚಾರಣಾ ನ್ಯಾಯಾಲಯದ ಆದೇಶ ರದ್ದುಗೊಳಿಸಿ ವ್ಯಕ್ತಿಯೊಬ್ಬರಿಗೆ ವಿಚ್ಛೇದನ ಮಂಜೂರು ಮಾಡಿದೆ.
ವಾದ-ಪ್ರತಿವಾದ ಆಲಿಸಿದ ಅನು ಶಿವರಾಮನ್ ಮತ್ತು ನ್ಯಾಯಮೂರ್ತಿ ಅನಂತ ರಾಮನಾಥ ಹೆಗಡೆ ಅವರಿದ್ದ ವಿಭಾಗೀಯ ನ್ಯಾಯಪೀಠ, ಪ್ರಕರಣದಲ್ಲಿ ಪತಿ ತನ್ನ ಮಗನ ಸಲುವಾಗಿ ಕಾನೂನುಬದ್ಧವಾಗಿ ನಿರ್ವಹಿಸಬೇಕಾಗಿರುವ ಕರ್ತವ್ಯಗಳನ್ನು ಪಾಲನೆ ಮಾಡಿಲ್ಲ. ಆತ ತನ್ನ ವಿರುದ್ಧ ಪತ್ನಿಯ ಮಾನಸಿಕ ಕೌರ್ಯವನ್ನು ಸಾಬೀತುಪಡಿಸಿದರೆ ಸಾಕು, ಆತನಿಗೆ ವಿವಾಹ ವಿಚ್ಛೇದನ ಮಂಜೂರು ಮಾಡಬೇಕಾಗುತ್ತದೆ ಎಂದು ಹೇಳಿದೆ.
ಪತಿ ಹಾಗೂ ಪತ್ನಿ ಪರಸ್ಪರ ಮಗುವಿನ ಸುಪರ್ದಿ ಮತ್ತು ನಿರ್ವಹಣೆ ವಿಚಾರದಲ್ಲಿ ಒಪ್ಪಿದ್ದಾರೆ. ದಾಖಲೆಗಳನ್ನು ಪರಿಶೀಲಿಸಿದರೆ ಪತ್ನಿ, ಪತಿಯ ಅನೈತಿಕ ಸಂಬಂಧವನ್ನು ಸಾಬೀತುಪಡಿಸುವಲ್ಲಿ ವಿಲರಾಗಿದ್ದಾರೆ. ಜತೆಗೆ ಅರ್ಜಿದಾರರು ಹೇಳಿರುವಂತೆ ಪತ್ನಿ, ಪತಿಯ ಕಚೇರಿಗೆ ಹೋಗಿ ಅವರ ಸಹೋದ್ಯೋಗಿಗಳ ಮುಂದೆ ಸಾಕಷ್ಟು ಹೀಯಾಳಿಸಿ ನಿಂದನೆ ಮಾತುಗಳನ್ನಾಡಿದ್ದಾರೆ. ಇದನ್ನು ಪಾಟೀ ಸವಾಲಿನಲ್ಲಿ ಪತ್ನಿ ನಿರಾಕರಿಸಿಲ್ಲ. ಇದನ್ನು ಪರಿಗಣಿಸಿದರೆ ಪರಿಗಣಿಸಿದರೆ ಪತಿಯು ಪತ್ನಿಯಿಂದ ಮೌನಸಿಕ ಕ್ರೌರ್ಯ ಅನುಭವಿಸುತ್ತಿರುವುದು ಸತ್ಯ. ಹಾಗಾಗಿ ಪತಿಗೆ ವಿಚ್ಛೇದನ ಮಂಜೂರು ಮಾಡಲಾಗುವುದು ಎಂದು ನ್ಯಾಯಪೀಠ ಆದೇಶಿಸಿದೆ.
ಪ್ರಕರಣದ ಹಿನ್ನೆಲೆ:
ಮೈಸೂರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ವ್ಯಕ್ತಿ ಮತ್ತು ಮಹಿಳೆ 2007ರ ಜ.28ರಂದು ಮದುವೆಯಾಗಿದ್ದರು. 2010ರಲ್ಲಿ ಗಂಡು ಮಗು ಜನಿಸಿತ್ತು. ಆನಂತರ ಮಹಿಳೆ ಪತಿ ತನ್ನ ತಂದೆಯಿಂದ 3 ಲಕ್ಷ ರೂ. ವರದಕ್ಷಿಣೆಗೆ ಬೇಡಿಕೆ ಇಟ್ಟಿದ್ದಾರೆ ಎಂದು ದೂರು ನೀಡಿದ್ದರು.
ಪೊಲೀಸರು ತನಿಖೆ ಬಳಿಕ ಬಿ ರಿಪೋರ್ಟ್ ಸಲ್ಲಿಸಿದ್ದರು. ಬಳಿಕ ಪತ್ನಿ. ಪತಿಗೆ ಬೇರೊಬ್ಬ ಮಹಿಳೆಯೊಂದಿಗೆ ಅನೈತಿಕ ಸಂಬಂಧವಿದೆ ಎಂದು ಆರೋಪಿಸಿದ್ದಾರೆ. 2018ರಲ್ಲಿ ವಿವಾಹ ವಿಚ್ಛೇದನ ಕೋರಿ ಪತಿ ಅರ್ಜಿ ಸಲ್ಲಿಸಿದ್ದರು.
ಬಳಿಕ ಸ್ನೇಹಿತರು ಹಾಗೂ ಕುಟುಂಬದವರ ಸಲಹೆಮೇರೆಗೆ ಆ ಅರ್ಜಿ ವಾಪಸ್ ಪಡೆದಿದ್ದರು. ಆನಂತರ ಮಾನಸಿಕ ಕ್ರೌರ್ಯದ ಆಧಾರದ ಮೇಲೆ 2019ರಲ್ಲಿ ಹೊಸದಾಗಿ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ್ದರು. ಅದನ್ನು ಮೈಸೂರಿನ ಕೌಟುಂಬಿಕ ನ್ಯಾಯಾಲಯ, ಪತಿಯು ಮೌನಸಿಕ ಕೌರ್ಯ ನೀಡುತ್ತಿದ್ದಾರೆಂದು ಸಾಬೀತುಪಡಿಸಲು ವಿಲರಾಗಿದ್ದಾರೆಂದು ಅವರ ಅರ್ಜಿಯನ್ನು ತಿರಸ್ಕರಿಸಿತ್ತು. ಅದನ್ನು ಪ್ರಶ್ನಿಸಿ ಪತಿ ಹೈಕೋರ್ಟ್ ಮೊರೆ ಹೋಗಿದ್ದರು.