ಅಕ್ರಮ ಆಸ್ತಿಗಳಿಕೆ ಆರೋಪ:ಪಿಡಿಒ ವಿರುದ್ಧ ಪ್ರಕರಣ ರದ್ದತಿಗೆ ‘ಹೈ’ ನಕಾರ

highcourt
Published on

ಬೆಂಗಳೂರು: ಆದಾಯಕ್ಕೂ ಮೀರಿ ಶೇ.488 ಅಕ್ರಮ ಆಸ್ತಿ ಗಳಿಕೆ ಆರೋಪದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಿರುದ್ಧ ಲೋಕಾಯುಕ್ತ ಪೊಲೀಸರು ದಾಖಲಿಸಿದ್ದ ಪ್ರಕರಣ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ.

ಪ್ರಕರಣ ಸಂಬಂಧ ತಮ್ಮ ವಿರುದ್ಧ ದಾಖಲಾದ ಎ್ಐಆರ್ ರದ್ದುಗೊಳಿಸುವಂತೆ ಕೋರಿ ದೇವನಹಳ್ಳಿ ತಾಲೂಕಿನ ಕುಂದಾಣ ಗ್ರಾಮ ಪಂಚಾಯಿತಿ ಪಿಡಿಒ ಡಿ.ಎಂ. ಪದ್ಮನಾಭ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಸ್.ವಿಶ್ವಜಿತ್ ಶೆಟ್ಟಿ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

ಈ ವೇಳೆ ಪದ್ಮನಾಭ ಪರ ವಕೀರು, ಅರ್ಜಿದಾರರ ವಿರುದ್ಧ ಎ್ಐಆರ್ ದಾಖಲಿಸುವ ಮೊದಲು ಅವರನ್ನು ಪ್ರಾಥಮಿಕ ವಿಚಾರಣೆಗೊಳಪಡಿಸಬೇಕಿತ್ತು. ಹಾಗೆ ಮಾಡದೆ ಕಾನೂನು ಬಾಹಿರವಾಗಿ ಮೊಕದ್ದಮೆ ದಾಖಲಿಸಲಾಗಿದೆ. ಅಲ್ಲದೆ ಯಾವುದೇ ಸರ್ಕಾರಿ ನೌಕರಿ ಹೊಂದಿಲ್ಲದಿದ್ದರು ಪ್ರಕರಣ ಸಂಬಂಧ ಅರ್ಜಿದಾರರ ಪತ್ನಿ ಹಾಗೂ ಅತ್ತೆಯ ವಿರುದ್ಧವೂ ದೂರು ದಾಖಲಿಸಲಾಗಿದೆ. ಉದ್ದೇಶಪೂರ್ವಕವಾಗಿ ಆಸ್ತಿಗಳ ಮೌಲ್ಯ ಹೆಚ್ಚಿಸಲಾಗಿದೆ. ಇದೆಲ್ಲ ಪೂರ್ವನಿಯೋಜಿತವಾಗಿದ್ದು ಪ್ರಕರಣವನ್ನು ರದ್ದುಗೊಳಿಸುವಂತೆ ಮನವಿ ಮಾಡಿದರು.

ಪ್ರತಿವಾದಿ ಪರ ವಕೀಲರು, ಅರ್ಜಿದಾರರ ವಿರುದ್ಧ ಆರೋಪಗಳು ಗಂಭೀರ ಸ್ವರೂಪದಿಂದ ಕೂಡಿದೆ. ಮಾತ್ರವಲ್ಲದೆ ಪ್ರಕರಣ ವಿಚಾರವಾಗಿ ಪೊಲೀಸರು ಸಲ್ಲಿಸಿದ ಮೂಲ ವರದಿ ಅನೇಕ ವಿಷಯಗಳನ್ನು ಬಹಿರಂಗಪಡಿಸುತ್ತದೆ. ದಾಖಲೆಗಳ ಅನುಸಾರ ಅರ್ಜಿದಾರರು ಆದಾಯಕ್ಕೂ ಮೀರಿ ಅಕ್ರಮ ಆಸ್ತಿ ಗಳಿಸಿರುವುದು ಸ್ಪಷ್ಟವಾಗಿ ತಿಳಿದು ಬರುತ್ತದೆ. ಪ್ರಕರಣ ವಿಚಾರಣಾ ಹಂತದಲ್ಲಿ ಇದೆ. ಈ ಹಂತದಲ್ಲಿ ಪ್ರಕರಣವನ್ನು ರದ್ದುಗೊಳಿಸದಂತೆ ನ್ಯಾಯಪೀಠವನ್ನು ಮನವಿ ಮಾಡಿದರು.

ಕೆಲ ಕಾಲ ವಾದ ಪ್ರತಿವಾದ ಆಲಿಸಿದ ಹಾಗೂ ದಾಖಲೆಗಳನ್ನು ಪರಿಶೀಲಿಸಿದ ನ್ಯಾಯಾಲಯ, ಅರ್ಜಿದಾರರು ಆದಾಯ ಮೀರಿ ಶೇ.488 ಅಕ್ರಮ ಆಸ್ತಿ ಗಳಿಸಿರುವುದು ಮೇಲ್ಮೋಟಕ್ಕೆ ತಿಳಿದುಬರುತ್ತದೆ ಬರುತ್ತದೆ. ಈ ಹಂತದಲ್ಲಿ ಪ್ರಕರಣ ರದ್ದುಪಡಿಸುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net