ಅಕ್ರಮ ಸಂಬಂಧ ಆರೋಪ; ನೇಣಿಗೆ ಶಾರಣು

Crime Logo
Published on

ಕೋಲಾರ: ಮಹಿಳೆಯೊಂದಿಗೆ ಯುವಕ ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಮೊಂಡಿರುವ ಘಟನೆ ಮಂಗಳವಾರ ರಾತ್ರಿ ಸಂಭವಿಸಿದೆ.

ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಎಸ್.ಜೀಡಮಾಕಲಪಲ್ಲಿ ಗ್ರಾಮದ ಮಹಿಳೆ ಅನಸೂಯ (೩೫) ಹಾಗೂ ಯುವಕ ವಿಜಯ್ ಕುಮಾರ್ (೨೮)  ಆತ್ಮಹತ್ಯೆಗೆ ಶರಣಾಗಿದ್ದಾರೆ.
ಅನಸೂಯ ಜೊತೆ ಅಕ್ರಮ ಸಂಬಂಧ ಹೊಂದಿದ್ದ ವಿಜಯ್ ಕುಮಾರ್ ಕಳೆದ ಎರಡು ತಿಂಗಳ ಹಿಂದೆ ಊರು ಬಿಟ್ಟು ನಾಪತ್ತೆಯಾಗಿದ್ದ ಜೋಡಿ,
ಅನಸೂಯ ಮತ್ತು ಮಂಜುನಾಥ್ ಜತೆ ವಿವಾಹವಾಗಿತ್ತು, ಇಬ್ಬರು ಮಕ್ಕಳಿದ್ದಾರೆ.
ಅನಸೂಯ ಮತ್ತು ವಿಜಯ್ ಕುಮಾರ್  ಅಕ್ರಮ ಸಂಬಂಧದ ಬಗ್ಗೆ ಪ್ರಶ್ನೆ ಮಾಡಿರುವ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತಪಡಿಸಿದ್ದಾರೆ. ರಾಯಲ್ಪಾಡು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net