ಕೋಟ ಶ್ರೀನಿವಾಸ ಪೂಜಾರಿ ವಿರುದ್ಧ ಆರೋಪ ಆಧಾರ ರಹಿತ

23
Published on


ಮೈಸೂರು: ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ಬಗ್ಗೆ ಮಾಜಿ ಸಚಿವ ಗೂಳಿಹಟ್ಟಿ ಶೇಖರ್ ಅವರು ಆಧಾರ ರಹಿತವಾಗಿ ಆರೋಪ ಮಾಡುತ್ತಿದ್ದು, ಇದನ್ನು ಖಂಡಿಸುತ್ತೇವೆ ಎಂದು ಬಿಜೆಪಿ ಒಬಿಸಿ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯ ಜೆ.ಪರುಶುರಾಮಪ್ಪ ಕಿಡಿಕಾರಿದ್ದಾರೆ.
ಕೋಟ ಶ್ರೀನಿವಾಸ ಪೂಜಾರಿ ಅವರ ಜೀವನ ಹಾಗೂ ಆಡಳಿತ ತೆರೆದ ಪುಸ್ತಕ ಇದ್ದಂತೆ. ಆದರೆ ಅವರು ಮಂತ್ರಿಯಾಗುವುದನ್ನು ತಪ್ಪಿಸುವ ಸಲುವಾಗಿ ಗೂಳಿಹಟ್ಟಿ ಶೇಖರ್ ಅವರು ಇಲ್ಲ, ಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ. ಇದು ಅವರ ಘನತೆಗೆ ತಕ್ಕದಲ್ಲ. ತಪ್ಪಿದ್ದರೆ ಸರಿಯಾದ ಟೀಕೆ, ಸಲಹೆಗಳನ್ನು ನೀಡಿ ಅವರನ್ನು ಸರಿ ದಾರಿಗೆ ತರುವ ಕೆಲಸ ಮಾಡಬೇಕು. ಆದನ್ನು ಬಿಟ್ಟು ಸಣ್ಣ ಮನಸ್ಥಿತಿ ಇಟ್ಟುಕೊಂಡು ಸುಖಾ ಸುಮ್ಮನೆ ದ್ವೇಷ ಮಾಡಬಾರದು ಎಂದು ಪತ್ರಿಕಾ ಹೇಳಿಕೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಶ್ರೀನಿವಾಸ ಪೂಜಾರಿ ಅವರು ಒಬ್ಬ ಉತ್ತಮ ಪ್ರಾಮಾಣಿಕ ವ್ಯಕ್ತಿಯಾಗಿದ್ದು, ತಮ್ಮ ವ್ಯಾಪ್ತಿಯ ಕೆಲಸವನ್ನು ಅತ್ಯುತ್ತಮವಾಗಿ ನಿರ್ವಹಣೆ ಮಾಡಿಕೊಂಡು ಜನರ ಸೇವೆ ಮಾಡಿಕೊಂಡು ಹೋಗುತ್ತಿದ್ದಾರೆ. ಆ ಮೂಲಕ ಜನರ ಕಷ್ಟ, ಸುಖಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿದ್ದಾರೆ. ಗೂಳಿಹಟ್ಟಿ ಶೇಖರ್ ಅವರು ತಮ್ಮ ಹೇಳಿಕೆಗಳನ್ನು ನಿಲ್ಲಿಸದಿದ್ದರೆ ಮುಂದೆ ಅವರ ವಿರುದ್ಧ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net