ಪಾಕ್​ ಪರ ಬೇಹುಗಾರಿಕೆ ಆರೋಪ; ಯೂಟ್ಯೂಬರ್ ಜ್ಯೋತಿಗೂ ಕೇಕ್ ಹೊತ್ತೊಯ್ಯುತ್ತಿದ್ದ ಪಾಕ್ ಏಜೆಂಟ್‌ಗೂ ಇದ್ಯಾ ಸಂಬಂಧ | Jyothi malhotra

jyothi malhotra
Published on

ನವದೆಹಲಿ: ಪ್ರಮುಖ ಭದ್ರತಾ ಕಾರ್ಯಾಚರಣೆಯೊಂದರಲ್ಲಿ, ಭಾರತೀಯ ಗುಪ್ತಚರ ಸಂಸ್ಥೆಗಳು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಸಕ್ರಿಯರಾಗಿರುವ ಹರಿಯಾಣದ ಜನಪ್ರಿಯ ಮಹಿಳಾ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಅವರನ್ನು ಪಾಕಿಸ್ತಾನಕ್ಕಾಗಿ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ ಬಂಧನ ಮಾಡಲಾಗಿದೆ. ಜ್ಯೋತಿ ಮಲ್ಹೋತ್ರಾ ನಡುವಿನ ನಂಟಿನ ಕುರಿತು ಕುರಿತು ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ದಾರೆ.

ಹರಿಯಾಣ ಮೂಲದ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ವಿರುದ್ಧದ ಬೇಹುಗಾರಿಕೆ ಪ್ರಕರಣದಲ್ಲಿ ಹೊಸ ಮಾಹಿತಿ ಹೊರಹೊಮ್ಮಿದ್ದು, ಪಾಕಿಸ್ತಾನಿ ಕಾರ್ಯಕರ್ತರೊಂದಿಗಿನ ಅವರ ಸಂಪರ್ಕದ ಬಗ್ಗೆ ಅನುಮಾನಗಳು ತೀವ್ರಗೊಂಡಿವೆ. 26 ಜೀವಗಳನ್ನು ಬಲಿತೆಗೆದುಕೊಂಡ ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕೇವಲ ಎರಡು ದಿನಗಳ ನಂತರ ನವದೆಹಲಿಯಲ್ಲಿರುವ ಪಾಕಿಸ್ತಾನ ಹೈಕಮಿಷನ್‌ಗೆ ಕೇಕ್ ತರುತ್ತಿದ್ದ ವ್ಯಕ್ತಿಯೊಂದಿಗೆ ಮಲ್ಹೋತ್ರಾ ಇರುವ ಫೋಟೋವೊಂದು ಹೊರಬಿದ್ದಿದೆ.

ಏಪ್ರಿಲ್ 24 ರಂದು ನವದೆಹಲಿಯಲ್ಲಿರುವ ಪಾಕಿಸ್ತಾನ ಹೈಕಮಿಷನ್‌ಗೆ ಪ್ರವೇಶಿಸುವಾಗ ವ್ಯಕ್ತಿಯೊಬ್ಬ ಕೇಕ್ ಹಿಡಿದುಕೊಂಡು ಹೋಗುತ್ತಿರುವುದು ಕಂಡುಬಂದಿದೆ.

ಪಾಕಿಸ್ತಾನಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಜ್ಯೋತಿ ಅವರು ಭಾಗವಹಿಸಿದ್ದ ಪಾರ್ಟಿಯ ವೀಡಿಯೊವನ್ನು ರೆಕಾರ್ಡ್ ಮಾಡಿದ್ದಾರೆ, ಅಲ್ಲಿ ಅವರು ಕೇಕ್ ತಂದಿದ್ದ ವ್ಯಕ್ತಿಯನ್ನು ಭೇಟಿಯಾಗುತ್ತಿರುವುದು ಕಂಡುಬಂದಿದೆ ಎಂದು ವರದಿಯಾಗಿದೆ.

(ಏಜೆನ್ಸೀಸ್)

ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ISI) ಜೊತೆ ಸಂಬಂಧ ಹೊಂದಿರುವ ಡ್ಯಾನಿಶ್ ಎಂದು ಗುರುತಿಸಲಾದ ಪಾಕಿಸ್ತಾನಿ ಹೈಕಮಿಷನ್ ಉದ್ಯೋಗಿಯೊಬ್ಬರು ಜ್ಯೋತಿಯನ್ನು ಹನಿಟ್ರ್ಯಾಪ್ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ತನಿಖೆಯಲ್ಲಿ ಈ ವರ್ಷದ ಏಪ್ರಿಲ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಮೂರು ತಿಂಗಳ ಮೊದಲು ಜ್ಯೋತಿ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ಗೆ ಭೇಟಿ ನೀಡಿದ್ದರು ಎಂಬುದಾಗಿ ತಿಳಿದು ಬಂದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net