ಕಾಂಗ್ರೆಸ್‌ನಲ್ಲಿ ಭಿನ್ನಾಭಿಪ್ರಾಯ ಶಮನ

B S Suresh
Published on

ಕೋಲಾರ: ಜಿಲ್ಲಾ ಕಾಂಗ್ರೆಸ್‌ನಲ್ಲಿ ಯಾವುದೇ ರೀತಿ ಗೊಂದಲಗಳಿಲ್ಲ, ಭಿನ್ನಾಭಿಪ್ರಾಯಗಳು ಶನಮಗೊಂಡಿದ್ದು ಪಕ್ಷದ ಅಭ್ಯರ್ಥಿಯ ಪರ ಎಲ್ಲಾ ಮುಖಂಡರು ಒಟ್ಟಾಗಿ ಕೆಲಸ‌ ಮಾಡುತ್ತಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಹೇಳಿದರು.
ನಗರದಲ್ಲಿ ಭಾನುವಾರ ಸುದ್ದಿಗಾರೊಂದಿಗೆ ಮಾತನಾಡಿ, ಊಹಪೋಹಗಳಿಗೆ ಯಾರು ಕಿವಿಗೋಡಬಾರದು, ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳಲು ಪ್ರಾಮಾಣಿಕವಾಗಿ ಕೆಲಸ ಮಾಡಲು ತಿಳಿಸಿದ್ದು, ಒಪ್ಪಿಕೊಂಡಿದ್ದಾರೆ ಎಂದರು.

ಟಿಕೆಟ್ಗಾಗಿ ಎರಡು ಗುಂಪುಗಳ ನಡುವೆ ಕಸರತ್ತು ನಡೆದಿತ್ತು, ಆದರೆ ಎರಡೂ ಕಡೆಯವರೊಂದಿಗೆ ಚರ್ಚಿಸಿ ಸಮಾಧಾನಕರವಾಗುವ ರೀತಿ ಗೌತಮ್ ಅವರನ್ನು ಹೈಕಮಾಂಡ್ ಅಂತಿಗೊಳಿಸಿ, ಘೋಷಿಸಿದ್ದಾರೆ. ಭಾನುವಾರವು ಕ್ಷೇತ್ರದ ಕಾಂಗ್ರೆಸ್ ಪದಾಧಿಕಾರಿಗಳ ಸಭೆ ನಡೆಸಲಾಗಿದ್ದು, ಮುಖಂಡರ ಗೊಂದಲಕ್ಕೆ ತೆರೆ ಎಳೆಯಲಾಗಿದೆ ಎಂದು ತಿಳಿಸಿದರು.
ಏ.೧ರಂದು ಕುರುಡಮಲೆಗೆ ಭೇಟಿ ನೀಡಿ ಗಣಪತಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ, ಚುನಾವಣಾ ಪ್ರಚಾರ ನಡೆಸಲಾಗುವುದು ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net