ಸಿಇಟಿ ಪರೀಕ್ಷೆ ಬಳಿಕ ಅರ್ಜಿ ತಿದ್ದುಪಡಿಗೆ ಅವಕಾಶ: ಅಭ್ಯರ್ಥಿಗಳಿಗೆ ಕೆಇಎ ಭರವಸೆ

CET Examination vvani
Published on

ಬೆಂಗಳೂರು: ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಏ.18ರಿಂದ ನಡೆಯುವ 2024ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಂತರ ಅಭ್ಯರ್ಥಿಗಳ ಅರ್ಜಿ ತಿದ್ದುಪಡಿಗೆ (ಎಡಿಟಿಂಗ್) ಅವಕಾಶ ನೀಡಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

ಈಗಾಗಲೇ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿರುವ ಅನೇಕ ಅಭ್ಯರ್ಥಿಗಳು ತಿದ್ದುಪಡಿ ಸಲುವಾಗಿ ಕೋರಿಕೆ ಸಲ್ಲಿಸುತ್ತಿದ್ದಾರೆ. ಆದರೆ, ಈ ಹಂತದಲ್ಲಿ ತಿದ್ದುಪಡಿಗೆ ಅವಕಾಶ ನೀಡಲಾಗುವುದಿಲ್ಲ. ಸಿಇಟಿ ಪರೀಕ್ಷೆ ಏ.18, 19, 20ರಂದು ನಡೆಯಲಿದ್ದು ಆ ನಂತರವೇ ತಿದ್ದುಪಡಿಗೆ ಅವಕಾಶ ನೀಡಲಾಗುವುದು. ಈ ಸಂಬಂಧ ದಿನಾಂಕವನ್ನು ಸದ್ಯದಲ್ಲೇ ಪ್ರಕಟಿಸಲಾಗುವುದು ಎಂದು ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net