ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ|Allowance for purchase of pulses and gram at support prices

Minister Shivanand Patil
Published on

ಬೆಂಗಳೂರು: ರಾಜ್ಯ ಸರ್ಕಾರದ ಮನವಿ ಮೇರೆಗೆ ತೊಗರಿ ಮತ್ತು ಕಡಲೆಯನ್ನು ಬೆಂಬಲ ಬೆಲೆಯಲ್ಲಿ ಖರೀದಿ(Allowance for purchase of pulses and gram at support prices) ಮಾಡಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ(Shivanand Patil) ತಿಳಿಸಿದ್ದಾರೆ.

ಪ್ರತಿ ಕ್ವಿಂಟಲ್‌ಗೆ ತೊಗರಿಗೆ 7,550 ರೂ. ಹಾಗೂ ಕಡಲೆಗೆ 5,650 ರೂ. ನಿಗದಿಪಡಿಸಲಾಗಿದೆ. ರಾಜ್ಯದಲ್ಲಿ ತೊಗರಿ ಬೆಳೆಯನ್ನು 15.02 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಲಾಗುತ್ತಿದ್ದು, ಅಂದಾಜು 11.96 ಲಕ್ಷ ಮೆಟ್ರಿಕ್‌ಟನ್ ಉತ್ಪಾದನೆಯನ್ನು ನಿರೀಕ್ಷಿಸಲಾಗಿದೆ. ಕಲಬುರಗಿ, ಯಾದಗಿರಿ, ಬೀದರ್, ರಾಯಚೂರು, ವಿಜಯಪುರ, ಕೊಪ್ಪಳ ಬೆಳಗಾವಿ, ಬಳ್ಳಾರಿ, ವಿಜಯನಗರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಖರೀದಿ ಕೇಂದ್ರ ಆರಂಭಿಸಲಾಗುವುದು. ರಾಜ್ಯ ಸರ್ಕಾರದ ಕೋರಿಕೆಯ ಮೇರೆಗೆ ಕೇಂದ್ರ ಸರ್ಕಾರ 3,06,150 ಮೆಟ್ರಿಕ್ ಟನ್ ಖರೀದಿಗೆ ಅನುಮತಿ ನೀಡಿದೆ ಎಂದು ಹೇಳಿದ್ದಾರೆ.

ಪ್ರಸ್ತುತ ಕಡಲೆಯನ್ನು 10.03 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯಲಾಗುತ್ತಿದ್ದು, ಅಂದಾಜು 6.63 ಲಕ್ಷ ಮೆಟ್ರಿಕ್‌ಟನ್ ಉತ್ಪಾದನೆಯನ್ನು ನಿರೀಕ್ಷಿಸಲಾಗಿದೆ. ಧಾರವಾಡ, ಕೊಪ್ಪಳ, ಬಳ್ಳಾರಿ, ಚಿತ್ರದುರ್ಗ, ಗದಗ, ಬೆಳಗಾವಿ, ವಿಜಯಪುರ ಕಲಬುರಗಿ, ಯಾದಗಿರಿ, ಬೀದರ್, ಬಾಗಲಕೋಟೆ, ದಾವಣಗೆರೆ, ಚಿಕ್ಕಮಗಳೂರು ಮತ್ತು ರಾಯಚೂರು ಜಿಲ್ಲೆಗಳಲ್ಲಿ ಖರೀದಿ ಕೇಂದ್ರ ಆರಂಭಿಸಲಾಗುವುದು. ಬೆಂಬಲ ಬೆಲೆಯಲ್ಲಿ 96,498 ಮೆಟ್ರಿಕ್ ಟನ್ ಕಡಲೆ ಖರೀದಿ ಮಾಡಲಾಗುವುದು. ಕೇಂದ್ರ ಸರ್ಕಾರ ಬೆಂಬಲ ಬೆಲೆಯಲ್ಲಿ ಖರೀದಿಗೆ ಅನುಮತಿ ನೀಡುತ್ತಿದ್ದಂತೆ ನೋಂದಣಿ ಮತ್ತು ಖರೀದಿ ಕೇಂದ್ರ ಆರಂಭಿಸಲು ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net