

Pushpa 2: ಟಾಲಿವುಡ್ನ ಸ್ಟೈಲಿಶ್ ಸ್ಟಾರ್, ನಟ ಅಲ್ಲು ಅರ್ಜುನ್ (Allu Arjun) ಮತ್ತು ರಶ್ಮಿಕಾ ಮಂದಣ್ಣ ಮುಖ್ಯಭೂಮಿಕೆಯಲ್ಲಿ ಅಭಿನಯದ 'ಪುಷ್ಪ 2' ದಿ ರೂಲ್ ಚಿತ್ರವು ಸದ್ಯ ಜಾಗತಿಕ ಬಾಕ್ಸ್ ಆಫೀಸ್ನಲ್ಲಿ ಈ ಹಿಂದಿನ ದಾಖಲೆಗಳನ್ನು ಮುರಿಯುತ್ತಿದೆ. ಸುಕುಮಾರ್ ನಿರ್ದೇಶನದ ಚಿತ್ರವು ಕೇವಲ ನಾಲ್ಕು ದಿನಗಳಲ್ಲಿ 821 ಕೋಟಿ ರೂ. ಗಳಿಸಿದೆ. ಆ್ಯಕ್ಷನ್ ಸೀಕ್ವೆನ್ಸ್ ಮತ್ತು ಹಾಡಿನಿಂದ ನೋಡುಗರನ್ನು ಮೋಡಿ ಮಾಡಿರುವ ಸಿನಿಮಾ, ಚಿತ್ರಮಂದಿರಗಳಲ್ಲಿ ಪ್ರೇಕ್ಷಕರನ್ನು ಹುಚ್ಚೆದ್ದು ಕುಣಿಯುವಂತೆ ಮಾಡಿದೆ.
ಪ್ಯಾನ್ ಇಂಡಿಯಾ 'ಪುಷ್ಪ 2' ಸಿನಿಮಾದಲ್ಲಿ ಅಲ್ಲು ಅರ್ಜುನ್ ಆ್ಯಕ್ಷನ್, ಡೈಲಾಗ್ ಮತ್ತು ಜಬರ್ದಸ್ತ್ ಡ್ಯಾನ್ಸ್ಗೆ ಪ್ರೇಕ್ಷಕರಿಂದ ಫುಲ್ ಮಾರ್ಕ್ಸ್ ಪಡೆದುಕೊಳ್ಳುತ್ತಿದೆ. ಪುಷ್ಪ 1 ಚಿತ್ರಕ್ಕಾಗಿ ಇತ್ತೀಚೆಗಷ್ಟೇ ರಾಷ್ಟ್ರಪ್ರಶಸ್ತಿ ಸ್ವೀಕರಿಸಿದ ನಟನಿಗೆ ಚಿತ್ರರಂಗದ ಗಣ್ಯರಿಂದ ಮತ್ತು ಇತರೆ ಕ್ಷೇತ್ರಗಳಿಂದ ಅಭಿನಂದನೆ ವ್ಯಕ್ತವಾಗಿತ್ತು. ತಮ್ಮ ಎರಡನೇ ಭಾಗದ ಚಿತ್ರದಲ್ಲಿನ ಅತ್ಯುತ್ತಮ ಅಭಿನಯಕ್ಕೆ ಐಕಾನ್ ಸ್ಟಾರ್ ದ್ವಿತೀಯ ಬಾರಿ ರಾಷ್ಟ್ರಪ್ರಶಸ್ತಿಗೆ ಮುತ್ತಿಡಲಿದ್ದಾರೆ ಎಂದು ಬಾಲಿವುಡ್ ಹಾಟ್ ಬ್ಯೂಟಿ ಊರ್ವಶಿ ರೌಟೇಲಾ ಅಭಿಪ್ರಾಯಿಸಿದ್ದಾರೆ.
ಮಲ್ಟಿಪ್ಲೆಕ್ಸ್ನಲ್ಲಿ ಚಿತ್ರ ವೀಕ್ಷಿಸಿದ ಊರ್ವಶಿ, ಸಿನಿಮಾ ಅದ್ಭುತವಾಗಿ ಮೂಡಿಬಂದಿದೆ. ಅದರಲ್ಲೂ ಜಾತ್ರೆಯ ಸೀನ್ ಅನ್ನು ಹಾಡಿ ಹೊಗಳಿದ ನಟಿ, ಅಲ್ಲು ಅರ್ಜುನ್ ಅವರ ಅಭಿನಯ ಅತ್ಯುತ್ತಮವಾಗಿದೆ. ಸಿನಿಮಾದಲ್ಲಿನ ನಟನೆಗೆ ಎರಡನೇ ರಾಷ್ಟ್ರಪ್ರಶಸ್ತಿ ತಯಾರಾಗುತ್ತಿದೆ. ಇಡೀ ಚಿತ್ರತಂಡಕ್ಕೆ ಅಭಿನಂದನೆ ಎಂದು ನಟಿ ತಮ್ಮ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳುವ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ,(ಏಜೆನ್ಸೀಸ್).