ಓದಿನ ಜತೆಗೆ ಕ್ರೀಡೆಯಲ್ಲೂ ತೊಡಗಿ

sgr sports
ಸಾಗರದಲ್ಲಿ ಆಯೋಜಿಸಿದ್ದ ವಲಯ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟವನ್ನು ಶಾಸಕ ಗೋಪಾಲಕೃಷ್ಣ ಬೇಳೂರು ಉದ್ಘಾಟಿಸಿದರು.
Published on

ಸಾಗರ: ಓದಿನ ಜತೆಗೆ ಮಕ್ಕಳು ಕ್ರೀಡೆಯಲ್ಲಿ ತೊಡಗುವುದರಿಂದ ದೈಹಿಕ ಮತ್ತು ಮಾನಸಿಕ ಸದೃಢತೆ ಸಾಧಿಸಲು ಸಾಧ್ಯ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.

ಸಾಗರದ ನೆಹರು ಮೈದಾನದಲ್ಲಿ ಮಂಗಳವಾರ ಶಾಲಾ ಶಿಕ್ಷಣ ಇಲಾಖೆ ಮತ್ತು ಸಂತ ಜೋಸೆಫ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಿಂದ ಆಯೋಜಿಸಿದ್ದ ವಲಯ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.

ಮಕ್ಕಳಿಗೆ ಓದುವಂತೆ ಒತ್ತಡ ಹೇರುವ ಜತೆಗೆ ಬಿಡುವಿನ ವೇಳೆ ಆಟೋಟಗಳಲ್ಲಿ ಪಾಲ್ಗೊಳ್ಳುವಂತೆ ಪಾಲಕರು ಪ್ರೇರೇಪಿಸಬೇಕು. ರಾಜ್ಯದಲ್ಲಿ 12 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವ ಪ್ರಕ್ರಿಯೆ ನಡೆಯುತ್ತಿದೆ. ಇದರಲ್ಲಿ ಸುಮಾರು 3 ಸಾವಿರ ದೈಹಿಕ ಶಿಕ್ಷಣ ಶಿಕ್ಷಕರೂ ಇದ್ದಾರೆ. ಸ್ಪರ್ಧೆಯಲ್ಲಿ ತೀರ್ಪುಗಾರರು ನಿಷ್ಪಕ್ಷಪಾತ ತೀರ್ಪು ನೀಡಬೇಕು ಎಂದು ತಿಳಿಸಿದರು.

ನಗರಸಭೆ ಅಧ್ಯಕ್ಷೆ ಮೈತ್ರಿ ಪಾಟೀಲ್ ಮಾತನಾಡಿ, ಮಕ್ಕಳು ಕ್ರಿಯಾಶೀಲವಾಗಿ ಇರಬೇಕಾದರೆ ಅವರಿಗೆ ವಿದ್ಯೆ ಎಷ್ಟು ಮುಖ್ಯವೋ ಕ್ರೀಡೆ, ಸಾಂಸ್ಕೃತಿಕ, ಸಾಹಿತ್ಯಕ ಚಟುವಟಿಕೆಗಳೂ ಅಷ್ಟೇ ಮುಖ್ಯ. ಮಕ್ಕಳ ಮನಸ್ಸನ್ನು ಅರಿತು ಪಾಲಕರು, ಶಿಕ್ಷಕರು ಅವರನ್ನು ಓದಿನಲ್ಲಿ ತೊಡಗುವಂತೆ ಮಾಡಬೇಕು ಎಂದರು

ನಗರಸಭೆ ಉಪಾಧ್ಯಕ್ಷೆ ಸವಿತಾ ವಾಸು, ಸದಸ್ಯರಾದ ಗಣಪತಿ ಮಂಡಗಳಲೆ, ಗಣೇಶಪ್ರಸಾದ್, ಬಿಇಒ ಪರಶುರಾಮಪ್ಪ, ದೈಹಿಕ ಶಿಕ್ಷಣ ಪರಿವೀಕ್ಷಕ ರಮೇಶ್, ಸಂತ ಜೋಸೆಫ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯಸ್ಥೆ ಸಿಸ್ಟರ್ ಲೆಮೆನ್ಸಿ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಸುಬ್ರಹ್ಮಣ್ಯ, ಸಿಸ್ಟರ್ ಮೆರಿನ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net