

ಕೋಲಾರ: ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧದ ಸನ್ನಿವೇಶ ಇರುವುದರಿಂದ, ಪರಿಸ್ಥಿತಿ ನಿರ್ವಹಿಸಲು ಅಧಿಕಾರಿಗಳು ಸದಾ ಸಿದ್ಧರಿರಬೇಕು ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಹೇಳಿದರು.
ನಗರದ ಜಿಲ್ಲಾಡಳಿತ ಭವನದಲ್ಲಿ ಯುದ್ಧ ಸನ್ನಿವೇಶದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕೈಗೊಳ್ಳಬೇಕಾದ ತುರ್ತು ಮುಂಜಾಗ್ರತಾ ಕ್ರಮಗಳ ಕುರಿತು ಹಮ್ಮಿಕೊಂಡಿದ್ದ ವಿಪತ್ತು ನಿರ್ವಹಣಾ ಸಭೆಯಲ್ಲಿ ಮಾತನಾಡಿ, ಯಾವ ಸಂದರ್ಭದಲ್ಲಿ ಏನಾಗುತ್ತದೊ ಗೊತ್ತಿಲ್ಲ. ಅಧಿಕಾರಿ, ಸಿಬ್ಬಂದಿ ಕೇಂದ್ರಸ್ಥಾನದಲ್ಲಿದ್ದು, ಪರಿಸ್ಥಿತಿಗನುಗುಣವಾಗಿ ಜವಾಬ್ದಾರಿ ನಿರ್ವಹಿಸಬೇಕು ಎಂದು ಸೂಚಿಸಿದರು.
ದೇವಾಲಯ, ಮಸೀದಿ, ಚರ್ಚ್, ಜನಸಂದಣಿ ಪ್ರದೇಶಗಳಲ್ಲಿ ಅಹಿತಕರ ಘಟನೆ ನಡೆದರೆ ಪರಿಸ್ಥಿತಿ ಹತೋಟಿಗೆ ತರಲು ಮುಂದಾಗಬೇಕು. ತಾಲೂಕು ಮಟ್ಟದಲ್ಲಿಯೂ ತಹಸೀಲ್ದಾರರು, ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿ ಇರಬೇಕು ಎಂದು ತಿಳಿಸಿದರು.
ತುರ್ತು ಪರಿಸ್ಥಿತಿಯಲ್ಲಿ ವಿವಿಧ ಇಲಾಖೆಗಳಿಗೆ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಹಂಚಿಕೆ ಮಾಡಲಾಗಿದೆ. ಮಾಜಿ ಸೈನಿಕರು ಎನ್ಸಿಸಿ, ಎನ್ಎಸ್ಎಸ್, ಪೊಲೀಸ್ ಇಲಾಖೆಯವರು ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು. ಅಧಿಕಾರಿಗಳು ಯಾವುದೇ ಕಾರಣಕ್ಕೂ ಕರ್ತವ್ಯದಲ್ಲಿ ರ್ನಿಲಕ್ಷ$್ಯ ತೋರಬಾರದು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರವಿಶಂಕರ್, ಉಪ ವಿಭಾಗಾಧಿಕಾರಿ ಡಾ. ಮೈತ್ರಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕೃಷ್ಣಮೂರ್ತಿ ಇದ್ದರು.
* ಪೂರ್ವತಯಾರಿ ಅಗತ್ಯ
ಆರೋಗ್ಯ ಇಲಾಖೆಯವರು ತುರ್ತು ಪರಿಸ್ಥಿತಿಯಲ್ಲಿ ಸಾರ್ವಜನಿಕರಿಗೆ ಚಿಕಿತ್ಸೆ ನೀಡಲು ಆಸ್ಪತ್ರೆಗಳಲ್ಲಿ ಔಷಧಗಳ ದಸ್ತಾನು ಮಾಡಬೇಕು. ಆಕ್ಸಿಜನ್, ಆಂಬುಲೆನ್ಸ್ಗಳ ಸಿದ್ಧತೆ ಮಾಡಿಟ್ಟುಕೊಳ್ಳಬೇಕು ಎಂದು ಕೆಜಿಎಫ್ ಪೊಲೀಸ್ ವರಿಷ್ಠಾಧಿಕಾರಿ ಶಾಂತರಾಜ್ ತಿಳಿಸಿದರು. ಅಗತ್ಯಕ್ಕನುಗುಣವಾಗಿ ಸಾರ್ವಜನಿಕರ ರಕ್ಷಣೆಗಾಗಿ ಅಗ್ನಿ ಶಾಮಕ, ಕಂದಾಯ, ಯುವಜನ ಸೇವೆ, ಲೋಕೋಪಯೋಗಿ, ಆಹಾರ, ಶಿಕ್ಷಣ, ಸಾರಿಗೆ, ಬೆಸ್ಕಾಂ, ಪೊಲೀಸ್ ಇಲಾಖೆಯವರು ಕಾರ್ಯನಿರ್ವಹಣೆಗೆ ಪೂರ್ವ ತಯಾರಿ ಮಾಡಿಟ್ಟುಕೊಳ್ಳಬೇಕು. ತುರ್ತು ಸಂದರ್ಭ ನಿರ್ವಹಣೆಗೆ ನಿವೃತ್ತ ಸೈನಿಕರಿಗೂ ಪ್ರತ್ಯೇಕ ಜವಾಬ್ದಾರಿ ಕೊಡಲಾಗುತ್ತದೆ. ಜಿಲ್ಲೆಯಲ್ಲಿನ ಹಾಸ್ಟೆಲ್ಗಳ ರಕ್ಷಣೆ ಕಡೆ ನಿಗಾ ವಹಿಸಬೇಕು. ತಾಲೂಕುಮಟ್ಟದಲ್ಲಿಯೂ ಸಭೆ ನಡೆಸಿ ಜಾಗೃತಿ ಕಾರ್ಯಕ್ರಮ ಕೈಗೊಳ್ಳಬೇಕು. ಮಾಕ್ ಡ್ರಿಲ್ ಮಾಡಿಸಲು ಮುಂದಾಗಬೇಕು ಎಂದು ಸಲಹೆ ನೀಡಿದರು.
* ನಿರಂತರ ಸಂಪರ್ಕದಲ್ಲಿರಿ
ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಪ್ರವಿಣ್ ಪಿ.ಬಾಗೇವಾಡಿ ದೇಶದಲ್ಲಿ ಯುದ್ಧದ ಸನ್ನಿವೇಶ ಇರುವುದರಿಂದ ತುರ್ತು ಪರಿಸ್ಥಿತಿಯಲ್ಲಿ ನಾಗರಿಕರ ರಕ್ಷಣೆಗೆ ಎಲ್ಲ ಇಲಾಖೆಗಳ ಅಧಿಕಾರಿಗಳು ರ್ನಿಲಕ್ಷ$್ಯವಹಿಸದೇ ಕೆಲಸ ನಿರ್ವಹಿಸಬೇಕು. ಏನಾದರೂ ಸಮಸ್ಯೆ ಉಂಟಾದಲ್ಲಿ ಜಿಲ್ಲಾಡಳಿತ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಪ್ರವಿಣ್ ಪಿ.ಬಾಗೇವಾಡಿ , ಜಿಲ್ಲಾ ಪಂಚಾಯಿತಿಯೊಂದಿಗೆ ನೆಚರ್ಚೆಯಾದ ವಿಷಯಗಳೇನು?ಬೇಕು ಎಂದು ರ್ಸೂಚಿಸಿದರು.
ಚರ್ಚೆಯಾದ ವಿಷಯಗಳು
* ಜಿಲ್ಲೆಯ ಮಾರ್ರ್ಕಂಡೆಯ ಡ್ಯಾಂ, ಕೆಇಬಿ ಪವರ್ ಗ್ರಿಡ್, ದೊಡ್ಡ ಆಸ್ಪತ್ರೆಗೆ ವಿಶೇಷ ಸೂಕ್ತ ಬಂದೋಬಸ್ತ್ ಗಾಗಿ ಪೊಲೀಸರ ನಿಯೋಜನೆ.
* ಪ್ರಮುಖ ಸ್ಥಳಗಳಲ್ಲಿ ಮಾಕ್ ಡ್ರಿಲ್ ಮಾಡುವ ಕುರಿತು ಯೋಜನೆ ಸಿದ್ಧ.
* ತಾಲಕು ಮಟ್ಟದಲ್ಲಿ ಜಾಗೃತಿ ಸಭು.
* ಜನಸಾಮಾನ್ಯರಲ್ಲಿ ಆತ್ಮಸ್ಥೆ$ರ್ಯ ತುಂಬಲುಅರಿವು ಕಾರ್ಯಕ್ರಮ ಆಯೋಜನೆ.
* ಸುಳ್ಳು ಸುದ್ದಿಗಳ ಕುರಿತು ಜನಸಾಮಾನ್ಯರು ಪ್ರತಿಕ್ರಿಯಿಸದಿರಲು ಸೂಚನೆ.
* ವಿವಿಧ ಇಲಾಖೆಗಳಿಗೆ ಯುದ್ಧ ಪರಿಸ್ಥಿತಿ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮಾಹಿತಿ.
* ಜನ ಸಾಮಾನ್ಯರಿಗೆ ಪೊಲೀಸರು ಹಾಗೂ ಸ್ಥಳಿಯ ಸಂಸ್ಥೆಗಳ ವಾಹನಗಳ ಮೂಲಕ ಸೈರನ್ ಸೂಚನೆ.
* ಜಿಲ್ಲಾಡಳಿತದಲ್ಲಿ ಕಂಟ್ರೋಲ್ ರೂಂ ಆರಂಭ.
* ಇಂಟರ್ನೆಟ್ ಸಂಪರ್ಕ ಸುಸ್ಥಿತಿಯಲ್ಲಿಟ್ಟುಕೊಳ್ಳಲು ಸೂಚನೆ.
* ತುರ್ತು ಪರಿಸ್ಥಿತಿಯಲ್ಲಿ ಮಾಧ್ಯಮಗಳಿಗೆ ಅಧಿಕೃತ ಸುದ್ದಿ ಬಿಡುಗಡೆಗೆ ನೋಡಲ್ ಅಧಿಕಾರಿ ನೇಮಕ.