

ಗುಂಟೂರು: ಜನಸೇನಾ ಪಕ್ಷದ ಅಧ್ಯಕ್ಷ ಪವನ್ ಕಲ್ಯಾಣ್ ಅವರನ್ನು ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ಅಂಬಾಟಿ ರಾಯುಡು ಅವರು ಜನಸೇನಾ ಪಕ್ಷದ ಮಂಗಳಗಿರಿ ಕಚೇರಿಯಲ್ಲಿ ಭೇಟಿ ಮಾಡಿದ್ದಾರೆ ಎನ್ನಲಾಗಿದೆ.
ಪವನ್ ಕಲ್ಯಾಣ್ ಭೇಟಿ ಮಾಡಿದ ರಾಯುಡು ಅರ್ಧ ಗಂಟೆಗಳ ಕಾಲ ಸುಧೀರ್ಘ ಚರ್ಚೆ ನಡೆಸಿದ್ದಾರೆ. ಜನಸೇನಾ ಪಕ್ಷ ಸೇರುವ ಸಾಧ್ಯತೆಗಳಿವೆ ಎನ್ನಲಾಗಿದೆ.
ಕೆಲ ದಿನಗಳ ಹಿಂದಷ್ಟೇ ಆಂಧ್ರಪ್ರದೇಶದ ವೈಎಸ್‌ಆರ್ ಕಾಂಗ್ರೆಸ್ ಪಕ್ಷ ಸೇರಿ ರಾಜೀನಾಮೆ ನೀಡಿದ್ದ ಅಂಬಾಟಿ ರಾಯುಡು ದಿಢೀರ್ ಪವನ್ ಕಲ್ಯಾಣ್ ಅವರನ್ನು ಭೇಟಿ ಮಾಡಿರುವುದು ಕುತೂಹಲ ಮೂಡಿಸಿದೆ.
ನಾನು ವೈಎಸ್‌ಆರ್‌ಸಿಪಿ ಪಕ್ಷವನ್ನು ತೊರೆಯುತ್ತಿದ್ದು ಸ್ವಲ್ಪ ಸಮಯದವರೆಗೆ ರಾಜಕೀಯದಿಂದ ದೂರವಿರಲು ನಿರ್ಧರಿಸಿದ್ದೇನೆ ಎಂಬುದಾಗಿ ರಾಯುಡು ಎಕ್ಸ್ ಮೂಲಕ ಹೇಳಿದ್ದರು. ಮುಂದಿನ ನಡೆ ಕುರಿತು ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ಬರೆದುಕೊಂಡಿದ್ದರು. ಆಂಧ್ರಪ್ರದೇಶ ವಿಧಾನಸಭೆಗೆ ನಡೆಯುವ ಚುನಾವಣೆಯಲ್ಲಿ ಟಿಡಿಪಿ ಮತ್ತು ಜನಸೇನಾ ಒಳಗೊಂಡ ಮಹಾ ಮೈತ್ರಿ ರಚಿಸಿ ಆಡಳಿತಾರೂಢ ವೈಎಸ್ಆರ್ ಕಾಂಗ್ರೆಸ್ ಪಕ್ಷದ ವಿರುದ್ಧ ಹೋರಾಡಲಿದೆ.