ಅಮರನಾಥ ಯಾತ್ರೆ: ಹೆಲಿಕಾಪ್ಟರ್ ಸೇವೆಗೆ ಬುಕಿಂಗ್ ಪ್ರಾರಂಭ

amaranatha
Published on

ಶ್ರೀನಗರ: ಅಮರನಾಥ ಯಾತ್ರೆ ಶೀಘ್ರದಲ್ಲೇ ಆರಂಭವಾಗಲಿದ್ದು, ಜೂನ್ 1 ರಿಂದ ಆನ್‌ಲೈನ್‌ನಲ್ಲಿ ಹೆಲಿಕಾಪ್ಟರ್ ಸೇವೆಗಳ ಮುಂಗಡ ಬುಕ್ಕಿಂಗ್ ಮಾಡಬಹುದು ಎಂದು ಜಮ್ಮು ಮತ್ತು ಕಾಶ್ಮೀರ ಅಧಿಕಾರಿಗಳು ಗುರುವಾರ ಯಾತ್ರಾರ್ಥಿಗಳಿಗೆ ಸ್ಪಷ್ಟಪಡಿಸಿದ್ದಾರೆ.

ಆದರೆ ಈ ಹೆಲಿಕಾಪ್ಟರ್ ಸೇವೆಯ ದರವನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.

ಅಮರನಾಥ ಯಾತ್ರೆ ಯಶಸ್ಸಿಗೆ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಬಾರ್ಡರ್ ರೋಡ್ ಆರ್ಗನೈಸೇಶನ್ ಸಿಬ್ಬಂದಿ ಈಗಾಗಲೇ ಬಾಲ್ಟಾಲ್-ಡೊಮೆಲ್ ರಸ್ತೆಯಲ್ಲಿ ಸಂಗ್ರಹವಾಗಿರುವ ಹಿಮವನ್ನು ತೆಗೆದುಹಾಕಿದ್ದಾರೆ. ಇನ್ನು ಕೆಲವೇ ದಿನಗಳಲ್ಲಿ ಈ ಎಲ್ಲ ಕಾಮಗಾರಿಗಳು ಪೂರ್ಣಗೊಳ್ಳಲಿವೆ. ಯಾತ್ರೆಯಲ್ಲಿ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಎಲ್ಲಾ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಈಗಾಗಲೇ ವಿವಿಧ ಇಲಾಖೆಗಳ ಮುಖ್ಯಸ್ಥರಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಈ ವರ್ಷ ಅಮರನಾಥ ಯಾತ್ರೆ ಜೂನ್ 29 ರಂದು ಆರಂಭವಾಗಲಿದೆ. ಪ್ರವಾಸವು ಆಗಸ್ಟ್ 19 ರಂದು ಕೊನೆಗೊಳ್ಳುತ್ತದೆ. ಅಂದರೆ ಒಟ್ಟು 52 ದಿನಗಳ ಕಾಲ ಈ ಪ್ರವಾಸ ಮುಂದುವರಿಯಲಿದೆ. ಮತ್ತೊಂದೆಡೆ, ಈ ಅಮರನಾಥ ಯಾತ್ರೆಯಲ್ಲಿ ಪಾಲ್ಗೊಳ್ಳಲು ದೇಶಾದ್ಯಂತ ಭಕ್ತರ ದಂಡು ಹರಿದು ಬರಲಿದೆ. ಆದರೆ ಈ ಯಾತ್ರೆಯಲ್ಲಿ ಪಾಲ್ಗೊಳ್ಳುವ ಭಕ್ತರ ಹೆಸರು ನೋಂದಾಯಿಸುವ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ ಎಂದು ತಿಳಿದುಬಂದಿದೆ. ಈ ಯಾತ್ರೆಯಲ್ಲಿ ಪಾಲ್ಗೊಳ್ಳುವ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಶ್ರೀ ಅಮರನಾಥ ದೇಗುಲ ಮಂಡಳಿ ವಿಶೇಷ ಕ್ರಮಗಳನ್ನು ಕೈಗೊಂಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net