30ರಂದು ಅಂಬೇಡ್ಕರ್ ಜಯಂತ್ಯುತ್ಸವ

Published on

ತಿ.ನರಸೀಪುರ: ಪಟ್ಟಣದ ತ್ರಿವೇಣಿ ನಗರದ ಅಂಬೇಡ್ಕರ್ ಕ್ಷೇಮಾಭಿವೃದ್ಧಿ ಸಮಿತಿಯ ವತಿಯಿಂದ ಮಹಾನಾಯಕ ವೃತ್ತದಲ್ಲಿ ಏ.30ರ ಬುಧವಾರ ಸಂಜೆ 4 ಗಂಟೆಗೆ ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜಯಂತ್ಯುತ್ಸವವನ್ನು ಆಯೋಜಿಸಲಾಗಿದೆ.

ನಳಂದ ಬುದ್ಧ ವಿಹಾರದ ಬೋಧಿರತ್ನ ಬಂತೇಜೀ ಅವರ ಸಾನ್ನಿಧ್ಯದಲ್ಲಿ ನಡೆಯುವ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಬಾಬಾ ಸಾಹೇಬರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವರು. ಸಂಸದ ಸುನೀಲ್ ಬೋಸ್ ಉತ್ಸವದ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಪುಷ್ಪಾರ್ಚನೆ ಮಾಡುವರು. ಸಮಿತಿಯ ಅಧ್ಯಕ್ಷ ಎನ್.ಮಹೇಶ್ ಅಧ್ಯಕ್ಷತೆ ವಹಿಸಲಿದ್ದು, ಸ್ಥಳೀಯ ಚುನಾಯಿತ ಜನಪ್ರತಿನಿಧಿಗಳು ಹಾಗೂ ಮುಖಂಡರು ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net