ತಿ.ನರಸೀಪುರ: ತಾಲೂಕಿನ ಯರಗನಹಳ್ಳಿ ಗ್ರಾಮದಲ್ಲಿ ಮೇ.1ರ ಗುರುವಾರ ಮಧ್ಯಾಹ್ನ 2 ಗಂಟೆಗೆ ಡಾ.ಬಿ.ಆರ್. ಅಂಬೇಡ್ಕರ್ ಅವರ 134ನೇ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಉರಿಲಿಂಗಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ ದಿವ್ಯ ಸಾನಿಧ್ಯ, ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಸಿ.ಮಹದೇವಪ್ಪ ಅಧ್ಯಕ್ಷತೆ ವಹಿಸಲಿದ್ದು, ಸಂಸದ ಸುನೀಲ್ ಬೋಸ್ ಉದ್ಘಾಟನೆ ನೆರವೇರಿಸುವರು. ಶಾಸಕ ದರ್ಶನ್ ಧ್ರುವನಾರಾಯಣ್ ಪುಷ್ಪಾರ್ಚನೆ ಮಾಡಲಿದ್ದು, ಮುಖ್ಯ ಭಾಷಣಕಾರರಾಗಿ ಕೆ. ಎನ್.ಪ್ರಭುಸ್ವಾಮಿ ಅಂಬೇಡ್ಕರ್ ವಿಚಾರವನ್ನು ಮಂಡಿಸುವರು. ಮುಖ್ಯ ಅತಿಥಿಗಳಾಗಿ ಪೊಲೀಸ್ ಇನ್ಸ್ಪೆಕ್ಟರ್ ಧನಂಜಯ, ಬಹುಜನ ಚಿಂತಕ ಹ.ರಾ. ಮಹೇಶ್, ಭಾರತೀಯ ಭಾಷಾ ಸಂಸ್ಥಾನದ ಬಿ.ಎಮ್. ಲಿಂಗರಾಜು ಹಾಗೂ ಇನ್ನಿತರರು ಭಾಗವಹಿಸಲಿದ್ದಾರೆ ಎಂದು ಗ್ರಾಮದ ಹಿರಿಯ ಮುಖಂಡ ಕಪ್ಪಣ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.