ಗಾಂಧೀಜಿ ಭಾವಚಿತ್ರದ ಜತೆ ಅಂಬೇಡ್ಕರ್ ಭಾವಚಿತ್ರ ಕಡ್ಡಾಯ

Simple celebration of Dr. Ambedkar Jayanti
ಡಾ.ಬಿ.ಆರ್​. ಅಂಬೇಡ್ಕರ್​
Published on

ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆ ಹಾಗೂ ಸಂವಿಧಾನ ದಿನಾಚರಣೆ(ನವೆಂಬರ್ 26) ಸಂದರ್ಭದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರ ಇಡುವಂತೆ ಸರ್ಕಾರ ಸುತ್ತೋಲೆ ಹೊರಡಿಸಿದೆ.

ಗಣರಾಜ್ಯೋತ್ಸವ ದಿನದೊಂದಿಗೆ ಸ್ವಾತಂತ್ರ್ಯ ದಿನಾಚರಣೆಯಂದು ಕೂಡ ರಾಜ್ಯದ ಎಲ್ಲ ಸರ್ಕಾರಿ ಕಚೇರಿ, ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು ಹಾಗೂ ಶಾಲೆ,ಕಾಲೇಜುಗಳು ಸೇರಿದಂತೆ ಸರ್ಕಾರದಿಂದ ನಡೆಯುವ ಎಲ್ಲ ಸಮಾರಂಭಗಳಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು ಭಾವಚಿತ್ರದೊಂದಿಗೆ ಸಂವಿಧಾನದ ಪಿತಾಮಹ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವನ್ನು ಸಹ ಕಡ್ಡಾಯವಾಗಿ ಇಡುವಂತೆ ಸೂಚಿಸಲಾಗಿದೆ.

ಸಂವಿಧಾನ ದಿನಾಚರಣೆ ಸಂದರ್ಭದಲ್ಲಿ ಸರ್ಕಾರದ ಎಲ್ಲ ಸಂಸ್ಥೆಗಳು, ಶಾಲೆ, ಕಾಲೇಜು ಹಾಗೂ ಸರ್ಕಾರಿ ಕಚೇರಿಗಳಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರವನ್ನು ಕಡ್ಡಾಯವಾಗಿ ಇಡುವಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸುತ್ತೋಲೆ ಹೊರಡಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net