ಕಾರ್ಗಲ್ ಪಿಎಚ್‌ಸಿಗೆ ಶೀಘ್ರ ಆಂಬುಲೆನ್ಸ್

sgr health
ಸಾಗರದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಡಾ. ನಟರಾಜ್, ಡಾ. ಎಲ್.ಸುರೇಶ್ ಇತರರಿದ್ದರು.
Published on

ಸಾಗರ: ನಮ್ಮ ಸರ್ಕಾರ ಆರೋಗ್ಯ ಮತ್ತು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುತ್ತಿದೆ. ತಾಲೂಕಿನ ಹಾಗೂ ಕಾರ್ಗಲ್ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ 108 ಆಂಬುಲೆನ್ಸ್ ವಾಹನ ಸೌಲಭ್ಯ ನೀಡಬೇಕು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಅಧಿಕಾರಿಗಳಿಗೆ ಸೂಚಿಸಿದರು.

ನಗರದಲ್ಲಿ ಮಂಗಳವಾರ ಆರೋಗ್ಯ ಇಲಾಖೆ ಅಧಿಕಾರಗಳ ಜತೆ ತುರ್ತು ಸಭೆ ನಡೆಸಿದ ಅವರು, 108 ಆಂಬುಲೆನ್ಸ್ ದುರಸ್ತಿಯಲ್ಲಿದೆ. ಅದನ್ನು ತಕ್ಷಣ ರಿಪೇರಿ ಮಾಡಿಸಿ ಸಾರ್ವಜನಿಕ ಸೇವೆಗೆ ಕಳಿಸಬೇಕು ಎಂದು ತಿಳಿಸಿದರು.

ಆನಂದಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬಹಳ ದಿನಗಳಿಂದ ಕೆಲವು ಕಾಮಗಾರಿಗಳು ಬಾಕಿ ಉಳಿದಿದ್ದವು. ಅವುಗಳನ್ನು ಶೀಘ್ರವೇ ಪೂರ್ಣಗೊಳಿಸಲು ಈಗಾಗಲೇ ಸೂಚಿಸಿದ್ದು, ಕೆಲಸ ಆರಂಭವಾಗಿದೆ. ಸ್ಥಳಕ್ಕೆ ಜಿಲ್ಲಾ ಮಟ್ಟದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸಾಗರ ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರ ಕೊರತೆ, ಾರ್ಮಸಿಸ್ಟ್‌ಗಳು ಇಲ್ಲ. ಒಂದು ವಾರದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಜಿಲ್ಲಾ ಆರೋಗ್ಯಾಧಿಕಾರಿಗೆ ಸೂಚಿಸಿದರು.

ತಾಯಿ-ಮಗು ಆಸ್ಪತ್ರೆಯಲ್ಲಿ ಜನರೇಟರ್ ಕಳ್ಳತನ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ. ಯಾರೇ ತಪ್ಪು ಮಾಡಿದ್ದರೂ ಅವರಿಗೆ ಕಾನೂನು ಪ್ರಕಾರ ಶಿಕ್ಷೆಯಾಗಬೇಕು. ತಪ್ಪಿತಸ್ಥರನ್ನು ಪಾರುಮಾಡುವ ಪ್ರಯತ್ನ ಮಾಡಬೇಡಿ. ಹಾಗೆಯೇ ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಸೇವೆ, ಆಸ್ಪತ್ರೆಗಳಲ್ಲಿ ಸ್ವಚ್ಛತೆ, ಮೂಲ ಸೌಲಭ್ಯ ಕಲ್ಪಿಸಿ ಎಂದರು.

ಡಾ. ನಟರಾಜ್, ಡಾ. ಎಲ್.ಸುರೇಶ್, ಪ್ರಮುಖರಾದ ಟಿ.ಪಿ.ರಮೇಶ್, ಗಣಪತಿ ಮಂಡಗಳಲೆ, ಜಯರಾಮ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net