ಗ್ರಾಪಂ ಅಧಿಕಾರಿಗಳ ವರ್ಗಾವಣೆ ನಿಯಮ ತಿದ್ದುಪಡಿ|Amendment

Vidhanasoudha
Published on

ಬೆಂಗಳೂರು: ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ, ಸಹಾಯಕರು ಸತತ 7 ವರ್ಷ ಸೇವೆಯ ನಂತರ ತಾಲೂಕು, ಜಿಲ್ಲೆ ತೊರೆಯುವ ನಿಯಮ(Amendment to the transfer rules of Gram Panchayat officers)ವನ್ನು ವರ್ಗಾವಣೆ ಪ್ರಕ್ರಿಯೆಯಿಂದ ಸರ್ಕಾರ ಕೈ ಬಿಟ್ಟಿದೆ.

ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ವರ್ಗಾವಣಾ ನಿಯಮ ತಿದ್ದುಪಡಿ ಮಾಡಲಾಗಿದ್ದು, ಹಿರಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಪಂಚಾಯಿತಿ ಅಭಿವೃದ್ದಿ ಅಧಿಕಾರಿ, ಗ್ರಾಪಂ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ ಗ್ರೇಡ್ 1 ಮತ್ತು ಗ್ರೇಡ್ 2 ಹಾಗೂ ದ್ವಿತೀಯ ದರ್ಜೆ ಲೆಕ್ಕೆ ಸಹಾಯಕರ ವರ್ಗಾವಣೆ ನಿಯಂತ್ರಣ ನಿಯಮಗಳಲ್ಲಿ ತಿದ್ದುಪಡಿ ಮಾಡಿ ಒಂದೇ ತಾಲೂಕಿನಲ್ಲಿ ನಿರಂತರವಾಗಿ 7 ವರ್ಷ ಸೇವೆ ಸಲ್ಲಿಸಿರುವ ವರ್ಗ-1ರ ನೌಕರರನ್ನು ಅದೇ ತಾಲೂಕಿನ ಗ್ರಾಮ ಪಂಚಾಯಿತಿಗಳಿಗೆ ಸ್ಥಳ ನಿಯುಕ್ತಿಗೊಳಿಸತಕ್ಕದ್ದಲ್ಲ ಎಂಬ ನಿಯಮದ ಬದಲಾಗಿ ಒಂದೇ ಗ್ರಾಮ ಪಂಚಾಯಿತಿಯಲ್ಲಿ 5 ವರ್ಷ ಸೇವೆ ಸಲ್ಲಿಸಿರುವ ವರ್ಗ-1ರ ನೌಕರರನ್ನು ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಪಂಚಾಯಿತಿಗೆ ಸ್ಥಳ ನಿಯುಕ್ತಿಗೊಳಿಸಲಾಗುವುದಿಲ್ಲ ಎಂದು ತಿದ್ದುಪಡಿ ಮಾಡಲಾಗಿದೆ. ಈ ತಿದ್ದುಪಡಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್

ಇಲಾಖೆ ನೌಕರರ ಬಹು ವರ್ಷಗಳ ಬೇಡಿಕೆಯಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net