'ಹರ್ ಘರ್ ತಿರಂಗ' ಅಭಿಯಾನ: ರಾಷ್ಟ್ರಧ್ವಜದ ಜೊತೆ ಸೆಲ್ಫೀ ಕ್ಲಿಕ್ಕಿಸಿ ಅಪ್​ಲೋಡ್ ಮಾಡಲು ಅಮಿತ್ ಷಾ ಮನವಿ

am
Published on

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಇಂದು 'ಹರ್ ಘರ್ ತಿರಂಗ' ಅಭಿಯಾನದಲ್ಲಿ ಭಾಗವಹಿಸುವಂತೆ ಜನರಿಗೆ ಮನವಿ ಮಾಡಿದ್ದಾರೆ. ಇದು ಪ್ರತಿಯೊಬ್ಬ ಭಾರತೀಯನ ಮೂಲಭೂತ ಏಕತೆಯನ್ನು ಜಾಗೃತಗೊಳಿಸುವ ರಾಷ್ಟ್ರೀಯ ಆಂದೋಲನವಾಗಿ ವಿಕಸನಗೊಂಡಿದೆ ಎಂದು ಹೇಳಿದರು.

ಈ ಹರ್ ಘರ್ ತಿರಂಗಾ ಅಭಿಯಾನದ ಭಾಗವಾಗಿ ಎಲ್ಲರೂ ತಮ್ಮ ಮನೆಗಳಲ್ಲಿ ರಾಷ್ಟ್ರಧ್ವಜವನ್ನು ಹಾರಿಸಬೇಕು. ಅದರ ಜೊತೆ ಸೆಲ್ಫೀ ತೆಗೆದುಕೊಂಡು ವೆಬ್​ಸೈಟ್​ನಲ್ಲಿ ಅಪ್​ಲೋಡ್ ಮಾಡಬೇಕು ಎಂದು ಅವರು ಮನವಿ ಮಾಡಿದ್ದಾರೆ.

ನಾಗರಿಕರು ತಮ್ಮ ಮನೆಗಳಲ್ಲಿ ರಾಷ್ಟ್ರಧ್ವಜವನ್ನು ಹಾರಿಸಬೇಕು. ಅದರೊಂದಿಗೆ ಸೆಲ್ಫಿ ತೆಗೆದುಕೊಳ್ಳಬೇಕು ಮತ್ತು ಚಿತ್ರವನ್ನು 'ಹರ್ ಘರ್ ತಿರಂಗ' ವೆಬ್‌ಸೈಟ್​ನಲ್ಲಿ (hargartiranga.com) ಅಪ್‌ಲೋಡ್ ಮಾಡಬೇಕು ಎಂದು ಷಾ ಹೇಳಿದರು.

“ಪ್ರಧಾನಿ ನರೇಂದ್ರ ಮೋದಿ ಅವರ ಹರ್ ಘರ್ ತಿರಂಗಾ (#HarGharTiranga) ಅಭಿಯಾನವು ಕಳೆದ ಎರಡು ವರ್ಷಗಳಿಂದ ರಾಷ್ಟ್ರೀಯ ಆಂದೋಲನವಾಗಿ ವಿಕಸನಗೊಂಡಿದ್ದು, ರಾಷ್ಟ್ರದ ಉದ್ದಗಲಕ್ಕೂ ಇರುವ ಪ್ರತಿಯೊಬ್ಬ ಭಾರತೀಯನಲ್ಲೂ ಮೂಲಭೂತ ಏಕತೆಯನ್ನು ಜಾಗೃತಗೊಳಿಸಿದೆ. ಈ ಆಂದೋಲನವನ್ನು ಮತ್ತಷ್ಟು ಹೆಚ್ಚಿಸಲು ಮತ್ತು ಮತ್ತೆ ಅದೇ ಉತ್ಸಾಹದಿಂದ ಭಾಗವಹಿಸಲು ನಾನು ಎಲ್ಲಾ ನಾಗರಿಕರಲ್ಲಿ ಮನವಿ ಮಾಡುತ್ತೇನೆ, ”ಎಂದು ಅವರು ಎಕ್ಸ್‌ನಲ್ಲಿ ಬರೆದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net