ಪಶ್ಚಿಮ ಬಂಗಾಳ ಚುನಾವಣಾ ಹಿಂಸಾಚಾರಕ್ಕೆ ಅಮಿತ್ ಶಾ ಹೊಣೆ ಎಂದ ದೀದಿ

mamata
Published on

ಕಲ್ಕತ್ತ: ಪಶ್ಚಿಮ ಬಂಗಾಳದ ಕೂಚ್ ಬೆಹರ್ ಜಿಲ್ಲೆಯ ಸೀತಾಲಕುಚಿ ವಿಧಾನಸಭಾ ಕ್ಷೇತ್ರದಲ್ಲಿ ಇಂದು ನಡೆದ ಚುನಾವಣಾ ಹಿಂಸಾಚಾರಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೇ ಹೊಣೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.

ಮತಗಟ್ಟೆಯೊಂದರಲ್ಲಿ ಹಿಂಸಾಚಾರಕ್ಕೆ ಯತ್ನಿಸಿದವರ ಮೇಲೆ ಭದ್ರತೆಯಲ್ಲಿದ್ದ ಸಿಐಎಸ್​ಎಫ್​ ಯೋಧರು ಹಾರಿಸಿದ ಗುಂಡಿನಿಂದ ಐವರು ಮತದಾರರು ಮೃತಪಟ್ಟಿದ್ದಾರೆ. ಇದಕ್ಕೆ ಅಮಿತ್ ಶಾ ಅವರೇ ಕಾರಣ ಎಂದು ದೀದಿ ಶನಿವಾರ ಹೇಳಿದ್ದಾರೆ.

ಮತದಾನಕ್ಕೆ ಸರತಿ ಸಾಲಿನಲ್ಲಿ ನಿಂತಿದ್ದವರ ಮೇಲೆ ಕೇಂದ್ರಿಯ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಕೇಂದ್ರದ ಅಧಿಕಾರಿಗಳ ನೆರಳಿನಲ್ಲೇ ಈ ಘಟನೆ ಆಗಿದೆ. ಇದಕ್ಕೆ ಅಮಿತ್ ಶಾ ವಿವರಣೆ ನೀಡಬೇಕು. ಬಿಜೆಪಿಗೆ ಸೋಲುವ ಭಯ ಕಾಡುತ್ತಿದೆ. ಅದಕ್ಕೆ ಹೀಗೆಲ್ಲ ಮಾಡುತ್ತಿದೆ ಎಂದು ಮಮತಾ ಆರೋಪಿಸಿದ್ದಾರೆ.

ಇನ್ನು ಈ ಘಟನೆ ಬಗ್ಗೆ ತನಿಖೆ ನಡೆಸಲು ಸಿಐಡಿಗೆ ಮಮತಾ ಬ್ಯಾನರ್ಜಿ ಆದೇಶಿಸಿದ್ದಾರೆ. ಚುನಾವಣಾ ಆಯೋಗ ಸೀತಾಲಕುಚಿಯ ಮತಗಟ್ಟೆಯಲ್ಲಿ ಮತದಾನವನ್ನು ರದ್ದು ಮಾಡಿದೆ. ನಾಳೆ ಹಿಂಸಾಚಾರ ನಡೆದ ಸ್ಥಳಕ್ಕೆ ಭೇಟಿ ನೀಡುವುದಾಗಿ ಮಮತಾ ಬ್ಯಾನರ್ಜಿ ಹೇಳಿದ್ಧಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net