ಕಾಂಗ್ರೆಸ್‌ನದ್ದು ತುಷ್ಟೀಕರಣ ರಾಜಕಾರಣವಾದರೆ ಬಿಜೆಪಿಯದ್ದು ವಿಕಾಸ ರಾಜಕಾರಣ; ಅಮಿತ್ ಷಾ

Amit Shah (1)
Published on

ಚಾಮರಾಜನಗರ: ಗುಂಡ್ಲುಪೇಟೆಯಲ್ಲಿ ಭರ್ಜರಿ ರೋಡ್ ನಡೆಸಿದ ಕೇಂದ್ರ ಗೃಹ ಸಚಿವ ಅಮಿತ್ ಷಾ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಾ, ಈ ಬಾರಿ ಕರ್ನಾಟಕದಲ್ಲಿ ಬಿಜೆಪಿಗೆ ಸಂಪೂರ್ಣ ಬಹುಮತ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಡಬಲ್ ಇಂಜಿನ್ ಸರ್ಕಾರ ಇದ್ದರೆ ಅಭಿವೃದ್ಧಿ ವೇಗವಾಗಿ ಆಗುತ್ತದೆ ಎಂದರು.

ಯಾರ ಮೀಸಲಾತಿ ಕಡಿಮೆ ಮಾಡುತ್ತೀರಾ?

ಕಾಂಗ್ರೆಸ್ ಮುಸ್ಲಿಮರಿಗೆ ನೀಡಿದ್ದ 4% ಮೀಸಲಾತಿ ತೆಗದು ಹಾಕಿ, ಲಿಂಗಾಯತರು, ಒಕ್ಕಲಿಗರಿಗೆ ಹಂಚಿದ್ದೇವೆ. ಡಿ.ಕೆ ಶಿವಕುಮಾರ್ ಮುಸ್ಲಿಮರಿಗೆ ಮರಳಿ ಮೀಸಲಾತಿ ಕೊಡುತ್ತೇವೆ ಎಂದು ಹೇಳುತ್ತಿದ್ದಾರೆ. ಯಾರ ಮೀಸಲಾತಿ ಕಡಿಮೆ ಮಾಡಿ ಅವರಿಗೆ ಕೊಡುತ್ತೀರಾ? ಲಿಂಗಾಯತರ ಮೀಸಲಾತಿ ಕಡಿಮೆ ಮಾಡುತ್ತೀರಾ ಅಥವಾ ಒಕ್ಕಲಿಗರ ಮೀಸಲಾತಿ ಕಡಿಮೆ ಮಾಡುತ್ತೀರಾ? ಎಂದು ಪ್ರಶ್ನಿಸಿದರು.

ಕಾಂಗ್ರೆಸ್​ನದ್ದು ತುಷ್ಟೀಕರಣ ರಾಜಕಾರಣ

ಅಮಿತ್ ಷಾ ಮಾತನಾಡುತ್ತಾ, ಕಾಂಗ್ರೆಸ್​ ತುಷ್ಟೀಕರಣ ರಾಜಕಾರಣ ಮಾಡುತ್ತಾ ಬರುತ್ತಿದೆ. ಆದರೆ ಮೋದಿ ನೇತೃತ್ವದ ಸರ್ಕಾರ ವಿಕಾಸ ರಾಜಕಾರಣ ಮಾಡುತ್ತಿದೆ ಎಂದು ಹೇಳುವ ಮೂಲಕ ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು.

ಗುಂಡ್ಲುಪೇಟೆಯಲ್ಲಿ ರೋಡ್ ಶೋ

ಬಿರುಬಿಸಿಲನ್ನು ಲೆಕ್ಕಿಸದ ನೆರೆದಿರುವ ಬಿಜೆಪಿಯ ಸಾವಿರಾರು ಕಾರ್ಯಕರ್ತರ ಸಮ್ಮುಖದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ರೋಡ್ ಶೋ ನಡೆಸಿದ್ದಾರೆ. ಗುಂಡ್ಲುಪೇಟೆ ಮುಖ್ಯರಸ್ತೆಯಲ್ಲಿ ತೆರೆದ ವಾಹನದಲ್ಲಿ ಭರ್ಜರಿ ಪ್ರಚಾರ ನಡೆದಿದೆ.

ಚಾಮುಂಡಿ ಬೆಟ್ಟದಲ್ಲಿ ವಿಶೇಷ ಪೂಜೆ

ಮೈಸೂರಿನಿಂದ ಹೆಲಿಕಾಪ್ಟರ್​​ನಲ್ಲಿ ಗುಂಡ್ಲುಪೇಟೆಗೆ ಆಗಮಿಸಿದ ಅಮಿತ್ ಶಾ, ಕಾರ್ಯಕರ್ತರ ಬಳಿಗೆ ಆಗಮಿಸಿ ನಂತರ ತೆರೆದ ವಾಹನ ಏರಿ ರೋಡ್ ಶೋ ಆರಂಭಿಸಿದರು. ಈ ವೇಳೆ ಸಂಸದ ಪ್ರತಾಪ್ ಸಿಂಹ, ಸಿ.ಎಸ್.ನಿರಂಜನ್ ಕುಮಾರ್ ಸಾಥ್​ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net