ಪಹಲ್ಗಾಮ್ ದಾಳಿ ಸ್ಥಳಕ್ಕೆ ಅಮಿತ್ ಶಾ ಭೇಟಿ; ಸಂತ್ರಸ್ತರ ಕುಟುಂಬಗಳಿಗೆ ಸಾಂತ್ವನ| amith shah

amith shah
Published on

Amith shah | ಪ್ರಧಾನಿ ನರೇಂದ್ರ ಮೋದಿ ನವದೆಹಲಿಗೆ ಆಗಮಿಸಿದ ಕೆಲವೇ ಗಂಟೆಗಳ ಬಳಿಕ, ಇಂದು (22) ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದಕ ದಾಳಿ ನಡೆದ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಜನಪ್ರಿಯ ಪ್ರವಾಸಿ ತಾಣದಲ್ಲಿ ಭಯೋತ್ಪಾದಕರಿಂದ ಕ್ರೂರವಾಗಿ ಗುಂಡಿನ ದಾಳಿಗೆ ಬಲಿಯಾದ ಪ್ರೀತಿಪಾತ್ರರ ಕುಟುಂಬಗಳನ್ನು ಅಮಿತ್ ಶಾ ಭೇಟಿ ಮಾಡಿದ್ದಾರೆ. ಜಮ್ಮು-ಕಾಶ್ಮೀರಕ್ಕೆ ಹೆಲಿಕಾಪ್ಟರ್​ನಲ್ಲಿ ಬಂದಿಳಿದಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಹಾಗೂ ಉಗ್ರರ ದಾಳಿಯಲ್ಲಿ ಬದುಕುಳಿದ ಮತ್ತು ಮೃತರ ಕುಟುಂಬಗಳನ್ನು ಭೇಟಿಯಾಗಿ, ಅವರಿಗೆ ಸಾಂತ್ವನ ಹೇಳಿದ್ದಾರೆ.

ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಸುದ್ದಿ ತಿಳಿಯುತ್ತಿದ್ದಂತೆಯೆ, ಕೇಂದ್ರ ಗೃಹ ಸಚಿವ ಅಮಿತ್ ಶಾ ನಿನ್ನೆಯೇ ಶ್ರೀನಗರಕ್ಕೆ ಬಂದು, ಭದ್ರತಾ ಪಡೆಗಳೊಂದಿಗೆ ಪರಿಸ್ಥಿತಿಯ ಪರಾಮರ್ಶೆ ನಡೆಸಿದ್ದರು. ಕೇಂದ್ರ ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್ ಕೂಡಾ ಈ ಭಯೋತ್ಪಾದಕ ದಾಳಿಯ ಕುರಿತು ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ದಿನೇಶ್ ತ್ರಿಪಾಠಿ ಸೇರಿದಂತೆ ಭದ್ರತಾ ಪಡೆಗಳ ಮುಖ್ಯಸ್ಥರಿಂದ ಮಾಹಿತಿ ಪಡೆದಿದ್ದರು.

(ಏಜೆನ್ಸೀಸ್)

ಈ ಸಂದರ್ಭದಲ್ಲಿ ಅಮಿತ್​ ಶಾ, ಮಾರಣಾಂತಿಕ ದಾಳಿ ನಡೆಸಿದ ಉಗ್ರರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಕನಿಷ್ಠ 26 ನಾಗರಿಕರು ಸೇರಿದಂತೆ ಹಲವಾರು ಪ್ರವಾಸಿಗರು ಸಾವನ್ನಪ್ಪಿದ್ದಾರೆ. ಇದು ಅತ್ಯಂತ ಭೀಕರ ದಾಳಿಯಾಗಿದೆ. ಕಾಲ್ನಡಿಗೆ ಅಥವಾ ಕುದುರೆ ಮೂಲಕ ತೆರಳಬೇಕಾದ ಬೈಸರಾನ್ ಕಣಿವೆ ಪ್ರದೇಶದಲ್ಲಿ ಈ ದಾಳಿ ನಡೆದಿದೆ. ಭೀಕರ ಕೃತ್ಯದಲ್ಲಿ ಭಾಗಿಯಾಗಿರುವವರನ್ನು ಸುಮ್ಮನೆ ಬಿಡಲ್ಲ. ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಅಮಿತ್ ಶಾ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net