ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವ ಹುನ್ನಾರ

dss
ಬಿಜೆಪಿ, ಜೆಡಿಎಸ್ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿವೆ ಎಂದು ಆರೋಪಿಸಿ ಡಿಎಸ್‌ಎಸ್ (ಸಂಯೋಜಕ) ಕಾರ್ಯಕರ್ತರು ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಪ್ರಮುಖರಾದ ಎಲ್.ರಾಜು, ವಿ.ನಾಗರಾಜ್, ಜಗದೀಶ್, ಅಣ್ಣಯ್ಯ ಇತರರಿದ್ದರು.
Published on

ಶಿವಮೊಗ್ಗ: ರಾಜ್ಯದಲ್ಲಿ ಪ್ರತಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ಜನರ ಹಿತಾಸಕ್ತಿ ಮರೆತು ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ಮಾಡುತ್ತಿವೆ. ಈ ಹೀನ ರಾಜಕಾರಣಕ್ಕೆ ಕಡಿವಾಣ ಹಾಕಿ ಜನರಿಂದ ಆಯ್ಕೆಯಾದ ಸರ್ಕಾರವನ್ನು ರಕ್ಷಿಸಬೇಕೆಂದು ಆಗ್ರಹಿಸಿ ಡಿಎಸ್‌ಎಸ್ (ಸಂಯೋಜಕ) ಕಾರ್ಯಕರ್ತರು ಮಂಗಳವಾರ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಚುನಾಯಿತ ಪ್ರತಿನಿಧಿಗಳು ಮತ್ತು ಆಡಳಿತಾರೂಢ ಸರ್ಕಾರಗಳು ಸಮುದಾಯಗಳ ಸಾರ್ವಭೌಮತ್ವವನ್ನು ಕಾಪಾಡಬೇಕೇ ಹೊರತೂ ಅಶಾಂತಿಯನ್ನಲ್ಲ. ಸಾಮಾಜಿಕ ನ್ಯಾಯ ಸಿಗದೆ, ಮಾನವ ಹಕ್ಕುಗಳು ದೊರೆಯದೇ ಇರುವ ಸಂದರ್ಭದಲ್ಲಿ ಹೋರಾಟ ಮಾಡುವುದನ್ನು ಬಿಟ್ಟು ಸಲ್ಲದ ವಿಷಯಗಳಿಗೆ ಬಿಜೆಪಿ ಮತ್ತು ಜೆಡಿಎಸ್ ಪ್ರತಿಭಟನೆ ನಡೆಸುತ್ತಿವೆ ಎಂದು ದೂರಿದರು.

ಕೋಮುವಾದಿಗಳ ಪ್ರಾಬಲ್ಯ ಮಣಿಸಲು ಪ್ರಗತಿಪರ, ಅಹಿಂದ ಹಾಗೂ ದಲಿತ ಸಂಘಟನೆಗಳು ಕಾಂಗ್ರೆಸ್‌ನ್ನು ಅಧಿಕಾರಕ್ಕೆ ತಂದಿವೆ. ಇದನ್ನು ಸಹಿಸದ ಬಿಜೆಪಿ ಮತ್ತು ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡು ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಮುಡಾ ಹಗರಣವನ್ನು ಹುಟ್ಟು ಹಾಕಿವೆ ಎಂದು ಆರೋಪಿಸಿದರು.

ಪ್ರಮುಖರಾದ ವಿ.ನಾಗರಾಜ್, ಎಲ್.ರಾಜು, ಅಣ್ಣಯ್ಯ, ಜಗದೀಶ್, ವಿರೂಪಾಕ್ಷಪ್ಪ ಪ್ರತಿಭಟನೆ ನಡೆಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net