ಪಾಕಿಸ್ತಾನದ ಮಸೀದಿಯಲ್ಲಿ ಬಾಂಬ್ ಸ್ಫೋಟ; 28 ಮಂದಿ ಸಾವು, 150ಕ್ಕೂ ಅಧಿಕ ಮಂದಿಗೆ ಗಾಯ

Peshawar blast
Published on

ಪಾಕಿಸ್ತಾನ: ಪೇಶಾವರದ ಮಸೀದಿಯೊಂದರಲ್ಲಿ ಬಾಂಬ್ ಸ್ಫೋಟಗೊಂಡಿದ್ದು, ಈವರೆಗೆ 28 ಜನರು ಸಾವನ್ನಪ್ಪಿದ್ದು, 150ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಬಾಂಬ್ ದಾಳಿ ನಡೆಸಿದ ಶಂಕಿತ ಆತ್ಮಾಹುತಿ ದಾಳಿ ಮಾಡಿಕೊಂಡಿದ್ದಾನೆ ಎಂದು ಪಾಕಿಸ್ತಾನದ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ವರದಿಯ ಪ್ರಕಾರ ಪೇಶಾವರದ ಮಸೀದಿಯಲ್ಲಿ ನಡೆದಿರುವ ಬಾಂಬ್ ಸ್ಫೋಟ ಮಧ್ಯಾಹ್ನ 1.40ರ ಸುಮಾರಿಗೆ ನಡೆದಿದೆ. ಭೀಕರ ಬಾಂಬ್ ದಾಳಿಯಿಂದ ಅನೇಕರು ಗಾಯಗೊಂಡಿದ್ದು, ವಿವಿಧ ಆಸ್ಪತ್ರೆಗಳಲ್ಲಿ ಸಂತ್ರಸ್ತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಬಹುತೇಕ ಮಂದಿಗೆ ಗಂಭೀರ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಸಾವಿನ ಸಂಖ್ಯೆಯೂ ಏರಿಕೆ ಆಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

ಬಾಂಬ್ ಸ್ಫೋಟಗೊಳ್ಳುತ್ತಿದ್ದಂತೆ ಮಸೀದಿಯ ಗೋಡೆ ಕುಸಿದು ನೆಲಕ್ಕಪ್ಪಳಿಸಿದೆ. ಘಟನೆಯ ಬಗ್ಗೆ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಪ್ರತಿಕ್ರಿಯಿಸಿ ಬಾಂಬ್ ದಾಳಿಯನ್ನು ಖಂಡಿಸಿದ್ದಾರೆ. ಪ್ರಧಾನಿ ಮಾತನಾಡುತ್ತಾ, ಮಸೀದಿಯೊಳಗೆ ಸ್ಫೋಟಕ್ಕೆ ಕಾರಣರಾದ ದಾಳಿಕೋರರು ಇಸ್ಲಾಂನೊಂದಿಗೆ ಯಾವುದೇ ಸಂಬಂಧ ಹೊಂದಿಲ್ಲ. ಪಾಕಿಸ್ತಾನವನ್ನು ಯಾರು ರಕ್ಷಿಸುವ ಕೆಲಸ ಮಾಡುತ್ತಿದ್ದಾರೋ ಅವರನ್ನೇ ಗುರಿಯಾಗಿಸಿ ಭಯ ಹುಟ್ಟಿಸಲು ಭಯೋತ್ಪಾದಕರು ನಡೆಸಿದ್ದಾರೆ ಎಂದು ಈ ಎಂದು ಹೇಳಿರುವುದು ವರದಿಯಾಗಿದೆ. (ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net