ಅಪರಿಚಿತ ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆ

murder
Published on

ಬೆಂಗಳೂರು: ಅಪರಿಚಿತ ವ್ಯಕ್ತಿಯೊಬ್ಬನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆ ಮಾಡಲಾಗಿದೆ.
ಜಯನಗರದ ೭ನೇ ಹಂತದಲ್ಲಿ ಸೋಮವಾರ ತಡರಾತ್ರಿ ಈ ಘಟನೆ ನಡೆದಿದೆ. ಕೊಲೆಯಾದ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಆತನ ಪತ್ತೆ ಕಾರ್ಯ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜಯನಗರದ ೭ನೇ ಹಂತದಲ್ಲಿ ಓಡಾಡಿಕೊಂಡಿದ್ದ ವ್ಯಕ್ತಿ, ಎಲ್ಲೆಂದರಲ್ಲಿ ಮಲಗುತ್ತಿದ್ದ. ಸೋಮವಾರ ರಾತ್ರಿ ವ್ಯಕ್ತಿಯೊಬ್ಬನ ಜತೆ ಗಲಾಟೆ ಮಾಡಿಕೊಂಡಿದ್ದ ಎಂಬುದು ಸ್ಥಳೀಯರಿಂದ ಗೊತ್ತಾಗಿದೆ. ಬಳಿಕ ರಸ್ತೆ ಬದಿ ಮಲಗಿದ್ದ. ತಡರಾತ್ರಿ ಭಾರೀ ಮಳೆ ಸುರಿಯುತ್ತಿದ್ದರಿಂದ ಅಂಗಡಿ ಮುಂಭಾಗ ಮಲಗಿದ್ದಾನೆ. ಈ ವೇಳೆ ಆತನ ಮೇಲೆ ಕಿಡಿಗೇಡಿಗಳು ಕಲ್ಲು ಎತ್ತಿಹಾಕಿ ಹತ್ಯೆಗೈದು ಪರಾರಿಯಾಗಿದ್ದಾರೆ. ವಿಚಾರ ತಿಳಿದು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದ ಪೊಲೀಸರು ಪರಿಶೀಲಿಸಿ, ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ. ಮೃತನ ವಿವರ ಇನ್ನೂ ಸಹ ಲಭ್ಯವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಬನಶಂಕರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net