ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಅಪರಿಚಿತ ವ್ಯಕ್ತಿ

rape
Published on

ಬೆಂಗಳೂರು: ಕಲ್ಕತ್ತದಲ್ಲಿ ತರಬೇತಿ ವೈದ್ಯೆ ಮೇಲೆ ನಡೆದಿರುವ ಭೀಕರ ಅತ್ಯಾಚಾರ ಪ್ರಕರಣ ಇಡೀ ದೇಶಾದ್ಯಂತ ಚರ್ಚೆಯಾಗುತ್ತಿರುವ ಬೆನ್ನಲ್ಲೆ ರಾಜಧಾನಿ ಬೆಂಗಳೂರಿನಲ್ಲಿ ನಾಗಲ್ಯಾಂಡ್ ಮೂಲದ ೨೧ ವರ್ಷದ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಅಮಾನುಷ ಘಟನೆ ನಡೆದಿದೆ.
ಎಚ್‌ಎಸ್‌ಆರ್ ಲೇಔಟ್ ೭ನೇ ಸೆಕ್ಟರ್‌ನ ರಾಜೀವ್‌ಗಾಂಧಿನಗರದ ಹೊಸೂರು ಮುಖ್ಯರಸ್ತೆಯ ಬಳಿಯ ಗಿರಿಯಾಸ್ ಶೋ ರೂಮ್ ಹಿಂಭಾಗದ ನಿರ್ಜನ ಪ್ರದೇಶದಲ್ಲಿ ಭಾನುವಾರ ಮಧ್ಯರಾತ್ರಿ ೧ ಗಂಟೆಯಿಂದ ೧.೩೦ ಗಂಟೆ ನಡುವೆ ಈ ಘಟನೆ ನಡೆದಿದೆ.
ಈ ಸಂಬಂಧ ಸಂತ್ರಸ್ತೆಯ ಸ್ನೇಹಿತ ನೀಡಿದ ದೂರಿನ ಮೇರೆಗೆ ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದೆ. ದುಷ್ಕರ್ಮಿಯ ಪತ್ತೆಗೆ ೪೦ ಪೊಲೀಸರನ್ನೊಳಗೊಂಡ ೫ ವಿಶೇಷ ತಂಡಗಳನ್ನು ರಚಿಸಿದ್ದು, ಶೋಧ ಕಾರ್ಯ ತೀವ್ರಗತಿಯಲ್ಲಿ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಪರಿಚಿತನ ಬಳಿ ಡ್ರಾಪ್ ಕೇಳಿದಳು:
ಚಂದಾಪುರದ ನಿವಾಸಿಯಾಗಿರುವ ಸಂತ್ರಸ್ತೆಯು ನಗರದ ಹೊರವಲಯದ ಖಾಸಗಿ ಕಾಲೇಜಿನಲ್ಲಿ ಬಿಬಿಎ ಅಂತಿಮ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದಾಳೆ. ಸಂತ್ರಸ್ತೆ ಹಾಗೂ ಸ್ನೇಹಿತರು ಶನಿವಾರ ರಾತ್ರಿ ಕೋರಮಂಗಲದ ಪಬ್‌ನಲ್ಲಿ ಪಾರ್ಟಿ ಮಾಡಿದ್ದಾರೆ. ಪಾರ್ಟಿ ಮುಗಿಸಿದ ಬಳಿಕ ಸಂತ್ರಸ್ತೆ ಮತ್ತು ಆಕೆಯ ಸ್ನೇಹಿತ ಕಾರಿನಲ್ಲಿ ಹೊರಟ್ಟಿದ್ದಾರೆ. ಕೋರಮಂಗಲದ ಫೋರಮ್ ಮಾಲ್ ಬಳಿ ಸ್ನೇಹಿತ ಚಲಾಯಿಸುತ್ತಿದ್ದ ಕಾರು ಆಟೋರಿಕ್ಷಾವೊಂದಕ್ಕೆ ಡಿಕ್ಕಿಯಾಗಿದೆ. ಈ ವೇಳೆ ಆಟೋ ಚಾಲಕ ಹಾಗೂ ಸಂತ್ರಸ್ತೆ ಸ್ನೇಹಿತನ ನಡುವೆ ಮಾತಿಗೆ ಮಾತು ಬೆಳೆದು ಜಗಳವಾಗಿದೆ. ಅಷ್ಟರಲ್ಲಿ ಹೊಯ್ಸಳ ಪೊಲೀಸರು ಸ್ಥಳಕ್ಕೆ ಬಂದಿದ್ದಾರೆ. ಇದರಿಂದ ಸಂತ್ರಸ್ತೆ ಗಾಬರಿಗೊಂಡಿದ್ದಾಳೆ. ಈ ವೇಳೆ ಸಂತ್ರಸ್ತೆ ಅಪರಿಚಿತ ದ್ವಿಚಕ್ರ ವಾಹನ ಸವಾರನ ಬಳಿ ಡ್ರಾಪ್ ಕೇಳಿದ್ದಾಳೆ. ದ್ವಿಚಕ್ರ ವಾಹನದಲ್ಲಿ ಸಂತ್ರಸ್ತೆಯನ್ನು ಕೂರಿಸಿಕೊಂಡು ಸುಮಾರು ಎರಡು ಕಿ.ಮೀ. ವರೆಗೆ ಡ್ರಾಪ್ ನೀಡಿದ್ದಾನೆ.

ಎಸ್‌ಒಎಸ್ ಬಟನ್ ಒತ್ತಿದ ಸಂತ್ರಸ್ತೆ:
ಬಳಿಕ ಮತ್ತೊಬ್ಬ ಅಪರಿಚಿತ ದ್ವಿಚಕ್ರ ವಾಹನ ಸವಾರನನ್ನು ಸಂತ್ರಸ್ತೆ ಡ್ರಾಪ್ ಕೇಳಿದ್ದಾಳೆ. ಆ ಅಪರಿಚಿತ ದ್ವಿಚಕ್ರ ವಾಹನ ಸವಾರ ಸಂತ್ರಸ್ತೆಯನ್ನು ಕೂರಿಸಿಕೊಂಡು ಸ್ವಲ್ಪ ದೂರು ಮುಂದೆ ಹೋಗಿ ನಂತರ ಬೇರೆ ಮಾರ್ಗಕ್ಕೆ ಹೋಗಿದ್ದಾನೆ. ಆಗ ಸಂತ್ರಸ್ತೆ ಮೊಬೈಲ್‌ನಲ್ಲಿದ ತುರ್ತು ಸಂದರ್ಭಗಳಲ್ಲಿ ಬಳಸುವ ಎಸ್‌ಒಎಸ್(ಸೇವ್ ಅವರ್ ಸೋಲ್) ಬಟನ್ ಒತ್ತಿದ್ದಾರೆ. ಆಗ ಸಂತ್ರಸ್ತೆಯ ಸ್ನೇಹಿತೆ ಮತ್ತು ಸ್ನೇಹಿತನ ಮೊಬೈಲ್‌ಗೆ ತುರ್ತು ಸಂದೇಶ ಹಾಗೂ ಸಂತ್ರಸ್ತೆ ಇದ್ದ ಸ್ಥಳದ ಲೊಕೇಶನ್ ಹೋಗಿದೆ. ಅಷ್ಟರಲ್ಲಿ ದ್ವಿಚಕ್ರ ವಾಹನ ಸವಾರ ಎಚ್‌ಎಸ್‌ಆರ್ ಲೇಔಟ್ ೭ನೇ ಸೆಕ್ಟರ್‌ನ ರಾಜೀವ್‌ಗಾಂಧಿನಗರದ ಹೊಸೂರು ಮುಖ್ಯರಸ್ತೆಯ ಬಳಿಯ ಗಿರಿಯಾಸ್ ಶೋ ರೂಮ್ ಹಿಂಭಾಗದ ನಿರ್ಜನ ಪ್ರದೇಶಕ್ಕೆ ಸಂತ್ರಸ್ತೆಯನ್ನು ಕರೆದೊಯ್ದಿದ್ದಾನೆ. ಈ ವೇಳೆ ಸಂತ್ರಸ್ತೆಯನ್ನು ಬೆತ್ತಲೆ ಗೊಳಿಸಿ, ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಆಗ ಸಂತ್ರಸ್ತೆಯು ಸಾಕಷ್ಟು ಪ್ರತಿರೋಧವೊ ಆತನ ಮುಖವನ್ನು ಪರಚಿ ಗಾಯಗೊಳಿಸಿದ್ದಾಳೆ ಎಂದು ತಿಳಿದು ಬಂದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net