ಬೆಂಗಳೂರು:
ವಿಧಾನ ಪರಿಷತ್‌ನಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪ್ರತಿಭಟನೆ ನಡುವೆಯೇ ಕರ್ನಾಟಕ ವಿಧಾನಮಂಡಲ (ಅನರ್ಹತಾ ನಿವಾರಣಾ) ಎರಡನೇ ತಿದ್ದುಪಡಿ) ವಿಧೇಯಕವನ್ನು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ಮಂಡಿಸಿದರು. ವಿಧೇಯಕವನ್ನು ಪರ್ಯಾಲೋಚಿಸಿದ ಬಳಿಕ ಧ್ವನಿ ಮತದಿಂದ ಅಂಗೀಕರಿಸಲಾಯಿತು.
ಸರಕು ಮತ್ತು ಸೇವೆಗಳ ತೆರಿಗೆ ವಿಧೇಯಕ
ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ (ತಿದ್ದುಪಡಿ) ವಿಧೇಯಕ, 2024 ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದರು. ವಿಧೇಯಕವನ್ನು ಪರ್ಯಾಲೋಚಿಸಿದ ನಂತರ ಅಂಗೀಕರಿಸಲಾಯಿತು.