ವ್ಹೀಲಿಂಗ್ ಮಾಡುತ್ತಿದ್ದವ ಅಂದರ್

Bike Wheeling
Published on

ಬೆಂಗಳೂರು: ರಸ್ತೆಯಲ್ಲಿ ದ್ವಿಚಕ್ರ ವಾಹನ ವ್ಹೀಲಿಂಗ್ ಮಾಡುತ್ತಿದ್ದ ಸವಾರನನ್ನು ಬೆಳ್ಳಂದೂರು ಸಂಚಾರ ಪೊಲೀಸರು ಬಂಧಿಸಿದ್ದಾರೆ.

ಇಬ್ಬಲೂರಿನ ಆಕಾಶ್ (21) ಬಂಧಿತ. ಇಬ್ಬಲೂರು ಆರ್ಮಿ ಕ್ಯಾಂಪ್ ಬಳಿಯ ಹೊರವರ್ತುಲ ರಸ್ತೆಯಲ್ಲಿ ವ್ಹೀಲಿಂಗ್ ಮಾಡುತ್ತಿದ್ದ. ಸಾರ್ವಜನಿಕರು ಮತ್ತು ವಾಹನ ಸಂಚಾರಕ್ಕೆ ಅಡಚಣೆ ಮಾಡುತ್ತಿದ್ದ. ಬಾತ್ಮೀದಾರರ ಮಾಹಿತಿ ಮೇರೆಗೆ ಬೆಳ್ಳಂದೂರು ಸಂಚಾರ ಪೊಲೀಸರು, ಕಾರ್ಯಾಚರಣೆ ನಡೆಸಿ ಸವಾರನನ್ನು ಪತ್ತೆಹಚ್ಚಿ ಬಂಧಿಸಿ, ದ್ವಿಚಕ್ರ ವಾಹನ ಜಪ್ತಿ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಳ್ಳಂದೂರು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net