

ಚಿತ್ತೂರು: ನಿಂತಿದ್ದ ಲಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಪೀಲೇರು-ಚಿತ್ತೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಶನಿವಾರ ಈ ಘಟನೆ ನಡೆದಿದ್ದು, ಮೃತರನ್ನು ನಂದ್ಯಾಲ ಜಿಲ್ಲೆಯ ನಿವಾಸಿಗಳು ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನು ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ತಿರುಪತಿಗೆ ರವಾನಿಸಲಾಗಿದೆ.
ಮೃತರು ನಂದ್ಯಾಲದಿಂದ ತಿರುವಣ್ಣಾಮಲೈಗೆ ಪ್ರಯಾಣಿಸುತ್ತಿದ್ದರು. ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಕ್ರೂಸರ್ ಗುದ್ದಿದ ಪರಿಣಾಮ ಘಟನೆ ಸಂಭವಿಸಿದೆ. ಮೃತರ ಮತ್ತು ಗಾಯಗೊಂಡವರ ಗುರುತು ಇನ್ನು ಪತ್ತೆಯಾಗಿಲ್ಲ. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.(ಏಜೆನ್ಸೀಸ್)