

ಗುಂಟೂರು: ಕೋವಿಡ್ 19 ಸೋಂಕು ಹರಡದಂತೆ ತಡೆಯಲು ಕೇಂದ್ರ ಸರ್ಕಾರ ರಾಷ್ಟ್ರಾದ್ಯಂತ ಲಾಕ್ಡೌನ್ ಘೋಷಿಸಿದೆ. ಲಾಕ್ಡೌನ್ ಅವಧಿಯಲ್ಲಿ ಜನರು ಅನಗತ್ಯವಾಗಿ ತಿರುಗದಂತೆ ತಡೆಯಲು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಹೀಗೆ ಕರ್ತವ್ಯದ ಒತ್ತಡದ ನಡುವೆಯೂ ಪೊಲೀಸ್ ಅಧಿಕಾರಿಯೊಬ್ಬರು ತಮ್ಮ ಧಾರ್ಮಿಕ ನಂಬಿಕೆಯಂತೆ ರಸ್ತೆಯಲ್ಲೇ ನಮಾಜ್ ಮಾಡಿರುವುದು ಎಲ್ಲರ ಮೆಚ್ಚುಗೆಗೆ ಪಾತ್ರವಾಗುತ್ತಿದೆ.
ಗುಂಟೂರಿನ ಲಾಲಾಪೇಟ್ ಪೊಲೀಸ್ ಠಾಣೆಯಲ್ಲಿ ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್ ಆಗಿರುವ ಕರೀಮುಲ್ಲಾ ನಮಾಜ್ ಮಾಡಿದವರು.
ಇದು ರಂಜಾನ್ ಮಾಸವಾಗಿದ್ದು, ಅವರು ಕರ್ತವ್ಯದ ನಡುವೆಯೂ ಬೆಳಗ್ಗೆಯಿಂದ ಉಪವಾಸ ಮಾಡಿದ್ದರು. ಸಂಜೆಯಾಗುತ್ತಲೇ ಅವರು ರಸ್ತೆಯ ನಡುವೆ ನಮಾಜ್ ಮಾಡಲು ಮುಂದಾದರೆ, ಅವರೊಂದಿಗೆ ಕರ್ತವ್ಯ ನಿರ್ವಹಿಸುತ್ತಿದ್ದ ಇತರೆ ಧರ್ಮದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಅವರ ನಮಾಜ್ಗೆ ಅಡ್ಡಿಯಾಗದಂತೆ ಎಚ್ಚರವಹಿಸಿದರು.