

ಆಂಧ್ರಪ್ರದೇಶ: ಮುಖ್ಯಮಂತ್ರಿ ವೈ.ಎಸ್ ಜಗನ್ ಮೋಹನ್ ರೆಡ್ಡಿ, ಇಂದು ವರ್ಚುವಲ್ ಮೂಲಕ ಅಧಿಕೃತವಾಗಿ ರಾಜ್ಯದ 13 ಹೊಸ ಜಿಲ್ಲೆಗಳಿಗೆ ಚಾಲನೆ ನೀಡಿದರು. ಇದರೊಂದಿಗೆ ಆಂಧ್ರಪ್ರದೇಶ ರಾಜ್ಯದ ಒಟ್ಟು ಜಿಲ್ಲೆಗಳ ಸಂಖ್ಯೆ 26ಕ್ಕೆ ಏರಿದೆ.
ಹೊಸ ಜಿಲ್ಲೆಗಳ ರಚನೆ ಮತ್ತು ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳನ್ನು ಪುನರ್ ರಚಿಸಿ ರಾಜ್ಯ ಸರ್ಕಾರ ಶನಿವಾರ ಗೆಜೆಟ್ ಅಧಿಸೂಚನೆ ಹೊರಡಿಸಿದೆ. ಸರ್ಕಾರವು ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು, ವಿಭಾಗೀಯ ಕಂದಾಯ ಅಧಿಕಾರಿಗಳು ಮತ್ತು ಇತರೆ ಅಧಿಕಾರಿಗಳನ್ನು ನೇಮಿಸಲಾಗಿದೆ.
ಜನಸಂಖ್ಯೆಯಲ್ಲಿ ನೆಲ್ಲೂರು ಜಿಲ್ಲೆ ಮೊದಲ ಸ್ಥಾನದಲ್ಲಿದೆ. ವಿಸ್ತೀರ್ಣದಲ್ಲಿ ಪ್ರಕಾಶಂ ಜಿಲ್ಲೆ ರಾಜ್ಯದಲ್ಲಿಯೇ ಅತಿ ದೊಡ್ಡ ಜಿಲ್ಲೆಯಾಗಿದೆ.