ಶಾಲೆಯಲ್ಲಿ ಹಲ್ಲಿ ಬಿದ್ದಿರುವ ಬಿಸಿಯೂಟ ಸೇವಿಸಿ 64 ಮಕ್ಕಳು ಅಸ್ವಸ್ಥ

mid day meal
Published on

ಆಂಧ್ರಪ್ರದೇಶ: ಸರ್ಕಾರಿ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿ 64 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಆಂಧ್ರಪ್ರದೇಶದ ಅನ್ನಮಯ್ಯ ನಗರದ ಟೇಕುಲಪಾಲೆಂ ಗ್ರಾಮದ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.

ಮಕ್ಕಳ ಸ್ಥಿತಿ ಸ್ಥಿರವಾಗಿದೆ. ಈ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಅಕ್ಕಿ ಬೇಯಿಸುವಾಗ ಹಲ್ಲಿಯೊಂದು ಪಾತ್ರೆಯೊಳಗೆ ಬಿದ್ದಿತ್ತು, ಆದರೆ ಅಡುಗೆ ಸಿಬ್ಬಂದಿ ಸರಿಯಾಗಿ ಪರಿಶೀಲಿಸದೆ ಆಹಾರವನ್ನು ವಿದ್ಯಾರ್ಥಿಗಳಿಗೆ ನೀಡಲಾಗಿತ್ತು. ಊಡ ಮಾಡಿದ ಮಕ್ಕಳು ಅಸ್ವಸ್ಥರಾಗಿದ್ದಾರೆ. ತಕ್ಷಣವೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ಕೆಲವು ದಿನಗಳ ಹಿಂದೆ ಕಲಬುರಗಿಯಲ್ಲಿ ಬಿಸಿಯೂಟದ ಸಾಂಬಾರನಲ್ಲಿ ಬಿದ್ದು 2ನೇ ತರಗತಿ ವಿದ್ಯಾರ್ಥಿನಿ ಸಾವನ್ನಪ್ಪಿದ್ದಳು. ಕಲಬುರಗಿಯ ಜಿಲ್ಲೆಯ ಅಫಜಲಪುರ ತಾಲೂಕಿನ ಚಿನಮಗೆರಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ 2ನೇ ತರಗತಿಯಲ್ಲಿ ಓದುತ್ತಿದ್ದ ಮಹಂತಮ್ಮ (7) ಗಾಯಗೊಂಡಿದ್ದಳು. ನವೆಂಬರ್ 16ರ ಮಧ್ಯಾಹ್ನ ಬಿಸಿ ಊಟ ತಯಾರು ಮಾಡುವ ಸಂದರ್ಭದಲ್ಲಿ ದುರ್ಘಟನೆ ನಡೆದಿತ್ತು. ನಂತರ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಳು.

ಈ ಹಿಂದೆ ಅಕ್ಟೋಬರ್​ನಲ್ಲಿ ಚೆಂಬೂರಿನ ಅನಿಕಗಾಂವ್​ ಹಿಂದಿ-ಮಾಧ್ಯಮ ಶಾಲೆಯ 11 ರಿಂದ 12ನೇ ವರ್ಷ ವಯಸ್ಸಿನ 16 ವಿದ್ಯಾರ್ಥಿಗಳು ಮಧ್ಯಾಹ್ನದ ಊಟವನ್ನು ಸೇವನೆ ಮಾಡಿದ್ದರು, ನಂತರ ಅನಾರೋಗ್ಯ ಕಾಡಿ ಆಸ್ಪತ್ರೆಗೆ ದಾಖಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net