ಬೇಡಿಕೆಗಳನ್ನು ಈಡೇರಿಸುವಂತೆ ಅಂಗನವಾಡಿ ಸಿಬ್ಬಂದಿ ಆಗ್ರಹ

anganavadi
ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಜಿ.ಜಿ.ಅಕ್ಕಮ್ಮ, ವೇದಾವತಿ, ವಿಶಾಲಾ, ರವೀಂದ್ರ ಸಾಗರ್, ಗಾಯತ್ರಿ ಹೆಗಡೆ, ವೀಣಾ, ಕಲಾವತಿ ಮತ್ತಿತರರು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
Published on

ಶಿವಮೊಗ್ಗ: ವಿವಿಧ  ಒತ್ತಾಯಿಸಿ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕರ ೆಡರೇಷನ್ ಜಿಲ್ಲಾ ಸಮಿತಿ ಪದಾಧಿಕಾರಿಗಳು ಎಐಟಿಯುಸಿ ನೇತೃತ್ವದಲ್ಲಿ ಬುಧವಾರ ಜಿಲ್ಲಾಕಾರಿ ಕಚೇರಿ ಸಹಾಯಕ ಅಧಿಕಾರಿ ಚನ್ನಪ್ಪ ಅವರಿಗೆ ಮನವಿ ಸಲ್ಲಿಸಿದರು.

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರನ್ನು ಸಿ ಮತ್ತು ಡಿ ದರ್ಜೆ ನೌಕರರನ್ನಾಗಿ ಪರಿಗಣಿಸಬೇಕು. ಸುಪ್ರೀಂ ಕೋರ್ಟ್ ಆದೇಶದಂತೆ 2011-12ನೇ ಸಾಲಿನ ನಂತರ ನಿವೃತ್ತಿ ಹೊಂದಿದ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗ್ರಾೃಚುಟಿ ನೀಡಬೇಕು. ನಿವೃತ್ತರಿಗೆ ಇಡುಗಂಟು ನೀಡಬೇಕು. ಆರೋಗ್ಯವಿಮೆ ಸೌಲಭ್ಯ ಒದಗಿಸಬೇಕೆಂದು ಒತ್ತಾಯಿಸಿದರು.

ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಜೀವನ ಭದ್ರತೆ ಒದಗಿಸಬೇಕು. ಸೇವೆ ಕಾಯಂಗೊಳಿಸಬೇಕು. ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಿಸುವ ನಿರ್ಧಾರ ಕೈಬಿಡಬೇಕು ಎಂದು ಆಗ್ರಹಿಸಿದರು.

ರಾಜ್ಯ ಸಮಿತಿ ಮುಖಂಡರಾದ ಜಿ.ಜಿ.ಅಕ್ಕಮ್ಮ, ಜಿಲ್ಲಾಧ್ಯಕ್ಷೆ ವಿಶಾಲಾ, ರಾಜ್ಯ ಸಂಚಾಲಕ ರವೀಂದ್ರ ಸಾಗರ್, ಪ್ರಮುಖರಾದ ವೇದಾವತಿ, ಸುಶೀಲಾಬಾಯಿ, ಗಾಯತ್ರಿ ಹೆಗಡೆ, ಶಶಿಕಲಾ, ಪುಷ್ಪ್ಪಾ, ವೀಣಾ, ಕಲಾವತಿ, ಮೀನಾಕ್ಷಿ, ಶ್ರೀಶೈಲಾ, ರೇಖಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net