

ರಾಣೆಬೆನ್ನೂರ: ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರನ್ನು ಖಾಯಂ ನೌಕರರನ್ನಾಗಿ ಘೋಷಿಸಬೇಕು. ಇಲ್ಲವಾದರೆ ಐಎಲ್ಸಿ ಶಿಾರಸ್ಸಿನಂತೆ ಕಾಮಿರ್ಕರಂತೆ ಪರಿಗಣಿಸಿ ಕನಿಷ್ಠ 28 ಸಾವಿರ ರೂ. ಮಾಸಿಕ ವೇತನ ನೀಡಬೇಕು ಎಂದು ಆಗ್ರಹಿಸಿ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಬುಧವಾರ ನಗರದ ಮಿನಿ ವಿಧಾನಸೌಧ ಎದುರು ಪ್ರತಿಭಟನೆ ನಡೆಸಿದರು.
ಆಶಾ, ಅಂಗನವಾಡಿ, ಬಿಸಿಯೂಟ ಮತ್ತು ಇತರ ಯೋಜನೆಗಳ ಅಡಿಯಲ್ಲಿ ಕೆಲಸ ಮಾಡುತ್ತಿರುವ ಕಾರ್ಯಕರ್ತೆಯರನ್ನು ಖಾಯಂ ಮಾಡಬೇಕು. ಅಲ್ಲಿಯವರೆಗೆ ಐಎಲ್ಸಿ ಶಿಫಾರಸ್ಸಿನಂತೆ ಕಾಮಿರ್ಕರು ಎಂದು ಪರಿಗಣಿಸಿ ಕನಿಷ್ಠ 28 ಸಾವಿರ ರೂ. ಮಾಸಿಕ ವೇತನ ನೀಡಬೇಕು.
ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ರಾಜ್ಯಸಭೆಗೆ ಮಾಹಿತಿ ನೀಡಿರುವಂತೆ ರಾಷ್ಟ್ರೀಯ ಆರೋಗ್ಯ ಮಿಷನ್ನ ಸ್ಟೀರಿಂಗ್ ಗ್ರೂಪ್ ಆಶಾ ಕಾರ್ಯಕರ್ತೆಯರ ಪ್ರೋತ್ಸಾಹ ಧನವನ್ನು ಹೆಚ್ಚಿಸಲು ನಿರ್ಧರಿಸಿದೆ. ಕೇಂದ್ರ ಸರ್ಕಾರ ಈ ನಿಟ್ಟಿನಲ್ಲಿ ಮುಂದುವರಿಯಲಿದೆ ಎಂದು ತಿಳಿಸಿದಂತೆ ಕೂಡಲೇ ಕೇಂದ್ರದಿಂದ ಆದೇಶಿಸಬೇಕು.
ಕಾಮಿರ್ಕ ವಿರೋಧಿ 4 ಕಾಮಿರ್ಕ ಸಂಹಿತೆಗಳನ್ನು ರದ್ದುಗೊಳಿಸಬೇಕು. ಯಾವುದೇ ರೂಪದಲ್ಲಿ ಖಾಸಗೀಕರಣ ಬೇಡ ಮತ್ತು ಎನ್ ಎಂಪಿಎಸ್ಅನ್ನು ರದ್ದು ಮಾಡಬೇಕು. ನರೇಗಾಕ್ಕೆ ಹೆಚ್ಚಿನ ಅನುದಾನ ನೀಡಿ ಮತ್ತು ಉದ್ಯೋಗ ಖಾತ್ರಿ ಯೋಜನೆಯನ್ನು ನಗರ ಪ್ರದೇಶಗಳಿಗೆ ವಿಸ್ತರಣೆ ಮಾಡಬೇಕು. ಗುತ್ತಿಗೆ ಹೊರಗುತ್ತಿಗೆ ಸೇರಿದಂತೆ ಎಲ್ಲ ಅನೌಪಚಾರಿಕ ವಲಯದ ಕಾಮಿರ್ಕರ ಸೇವೆಯನ್ನು ಖಾಯಂಗೊಳಿಸಬೇಕು ಎಂಬುದು ಸೇರಿ ಪ್ರಮುಖ ಇತರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿದರು. ತಹಸೀಲ್ದಾರ್ ಆರ್.ಎಚ್. ಭಾಗವಾನ್ ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಪ್ರಮುಖರಾದ ಸುಧಾ ಹಲಗೇರಿ, ರೂಪಾ ಮುದಿಗೌಡ್ರ, ತ್ರೇವೆಣಿ ಬೆನ್ನೂರ, ದ್ರಾಾಯಿಣಿ ಬನ್ನೂರ, ನೇತ್ರಾವತಿ ಸಿಂಗ್ರಿ, ದುರ್ಗಮ್ಮ ಕರ್ಜರಿ, ಗಾಯತ್ರಿ ಕುದರಿಹಾಳ, ತೇಜಸ್ವಿನಿ ಕುದರಿಹಾಳ, ಮಮತಾ ಮಾಳಗಿ, ಲಲಿತಾ ಬ್ಯಾಡಗಿ ಮತ್ತಿತರರು ಪಾಲ್ಗೊಂಡಿದ್ದರು.