

ಮುಂಬೈ: ಮಹಾರಾಷ್ಟ್ರದ (Maharashtra) ಠಾಣೆ ನಗರದಲ್ಲಿ ಬೀದಿ ನಾಯಿಯನ್ನು (Stray Dog ) ಹೊಡೆದು ಸಾಯಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನ ವಿರುದ್ಧ ಎಫ್ಐಆರ್ (FIR) ದಾಖಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಆರೋಪಿಯನ್ನು ಗೋಕುಲ್ ಥೋರ್ ಎಂದು ಗುರುತಿಸಲಾಗಿದೆ. ಗುರುವಾರ (ಸೆಪ್ಟೆಂಬರ್ 19) ಘೋಡ್ ಬಂದರ್ ನ ಮೊಗರ್ಪಾಡಾದಲ್ಲಿ ಈ ಘಟನೆ ಸಂಭವಿಸಿದೆ.
ದೂರಿನ ಪ್ರಕಾರ, ಆರೋಪಿ ಗೋಕುಲ್ ಥೋರ್ ನಾಯಿಯನ್ನು ಕ್ರಿಕೆಟ್ ಬ್ಯಾಟ್ನಿಂದ ಕ್ರೂರವಾಗಿ ಹೊಡೆದಿದ್ದು, ತೀವ್ರವಾಗಿ ಗಾಯಗೊಳಿಸಿದ್ದಾನೆ. ಚಿಕಿತ್ಸೆ ಕೊಡಿಸಿದಾದರೂ ನಾಯಿ ಬದುಕುಳಿಯಲಿಲ್ಲ ಎಂದು ಸಾಮಾಜಿಕ ಕಾರ್ಯಕರ್ತರೊಬ್ಬರು ನೀಡಿದ ದೂರಿನಲ್ಲಿ ಉಲ್ಲೇಖಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ಭಾರತೀಯ ನ್ಯಾಯ ಸಂಹಿತಾ ಮತ್ತು ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಯ ಸೆಕ್ಷನ್ 325 (ಪ್ರಾಣಿಗಳನ್ನು ಕೊಲ್ಲುವ ಅಥವಾ ಅಂಗವಿಕಲಗೊಳಿಸುವ ಮೂಲಕ ದುಷ್ಕೃತ್ಯ) ಅಡಿಯಲ್ಲಿ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.