ಪ್ರಾಣಿ ಕಲ್ಯಾಣ ಮಂಡಳಿ ಸ್ಥಾಪನೆ

28kmr3(Prabhu chavan, MLA)
Published on

ಬೆಂಗಳೂರು: ಪ್ರಾಣಿ ಹಿಂಸೆ ತಡೆಯುವ ಕಾನೂನುಗಳನ್ನು ಬಿಗಿಗೊಳಿಸಲು ಕ್ರಮ ವಹಿಸಿ ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ಪ್ರಾಣಿ ಕಲ್ಯಾಣ ಮಂಡಳಿ ಸ್ಥಾಪಿಸಲಾಗಿದೆ ಎಂದು ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್ ತಿಳಿಸಿದ್ದಾರೆ.

ಸುಪ್ರೀಂಕೋರ್ಟ್ ಆದೇಶದಂತೆ ಮಂಡಳಿ ಸ್ಥಾಪನೆಯಾಗಿದೆ. ಪ್ರಾಣಿ ಕಲ್ಯಾಣಕ್ಕೆ ಸಂಬಂಧಿಸಿ ದಂತೆ ಕಾಲಕಾಲಕ್ಕೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಸರ್ಕಾರಕ್ಕೆ ಸಲಹೆ ನೀಡಲಿದೆ. ಪಶು, ಪಕ್ಷಿಗಳ ಸಂರಕ್ಷಣಗಾಗಿ ಅಸ್ತಿತ್ವದಲ್ಲಿರುವ ಪ್ರಾಣಿ ಕಲ್ಯಾಣ ಸಂಘಗಳು, ನಿಕಾಯಗಳು, ಸಂಸ್ಥೆಗಳಿಗೆ ಮಾನ್ಯತೆ ಹಾಗೂ ಸಂಲಗ್ನತೆ ನೀಡುವುದು. ಪ್ರಾಣಿಗಳಿಗಾಗಿ ಶೆಡ್​ಗಳು, ನೀರಿನ ತೊಟ್ಟಿಗಳ ನಿರ್ಮಾಣಕ್ಕೆ ಪ್ರೋತ್ಸಾಹ, ಪ್ರಾಣಿಗಳ ರಕ್ಷಣೆ ಕುರಿತು ಜನರಲ್ಲಿ ಅರಿವು ಮೂಡಿಸುವುದು, ಪ್ರಾಣಿಗಳ ಸಾಗಣೆ ಸಂದರ್ಭದಲ್ಲಿ ಅನವಶ್ಯಕವಾಗಿ ನೋವು, ಯಾತನೆ ತಡೆಗಟ್ಟಲು ಮಂಡಳಿ ಕ್ರಮ ಕೈಗೊಳ್ಳಲಿದೆ ಎಂದಿದ್ದಾರೆ.

ಜಾನುವಾರುಗಳ ಆರೋಗ್ಯ ಕಾಪಾಡಲು 16 ಜಿಲ್ಲೆಗಳಲ್ಲಿ ಸುಸಜ್ಜಿತ ಪಶು ಚಿಕಿತ್ಸಾ ವಾಹನ (ಆಂಬುಲೆನ್ಸ್) ಲೋಕಾರ್ಪಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net