

ನವದೆಹಲಿ: ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆಯವರು ಇದೀಗ ಮತ್ತೊಮ್ಮೆ ಉಪವಾಸ ಸತ್ಯಾಗ್ರಹ ಮಾಡಲು ಮುಂದಾಗಿದ್ದಾರೆ. ಈ ವಿಚಾರವಾಗಿ ಕೇಂದ್ರ ಸಚಿವರೊಬ್ಬರಿಗೆ ಹಜಾರೆಯವರು ಪತ್ರ ಬರೆದಿದ್ದಾರೆ.
ದೇಶದಲ್ಲಿ ನಡೆಯುತ್ತಿರುವ ರೈತ ಹೋರಾಟದ ಬಗ್ಗೆ ನಿಮಗೆ ಗೊತ್ತೇ ಇದೆ. ಇದೀಗ ಅಣ್ಣಾ ಹಜಾರೆಯವರು ಇದೇ ವಿಚಾರವಾಗಿ ಸತ್ಯಾಗ್ರಹಕ್ಕೆ ಮುಂದಾಗಿದ್ದಾರೆ. ಕೇಂದ್ರ ಸರ್ಕಾರ ಆದಷ್ಟು ಬೇಗ ರೈತರ ಸಮಸ್ಯೆಯನ್ನು ಬಗೆಹರಿಸದಿದ್ದರೆ ನಾನು ಉಪವಾಸ ಸತ್ಯಾಗ್ರಹ ಮಾಡಲಿದ್ದೇನೆ ಎಂದು ಅಣ್ಣಾ ಹಜಾರೆಯವರು ಕೇಂದ್ರ ಕೃಷಿ ಸಚಿವರಿಗೆ ಪತ್ರ ಬರೆದಿದ್ದಾರೆ.
ರಾಷ್ಟ್ರ ರಾಜಧಾನಿಯಲ್ಲಿ ರೈತ ಹೋರಾಟ ದಿನೇದಿನೆ ತೀವ್ರತೆ ಪಡೆದುಕೊಳ್ಳಲಾರಂಭಿಸಿದೆ. ಆರನೇ ಸುತ್ತಿನ ಮಾತುಕತೆಯೂ ರದ್ದಾಗಿದೆ. ಯಾವುದೇ ಸಮಯದಲ್ಲಾದರೂ ರೈತ ಮುಖಂಡರೊಡನೆ ಮಾತನಾಡಲು ಸಿದ್ಧ ಎಂದು ಕೇಂದ್ರ ಹೇಳಿದೆ. ಆದರೆ ಕಾಯ್ದೆಗಳನ್ನು ಹಿಂಪಡೆಯುವುದಾದರೆ ಮಾತ್ರವೇ ಮಾತುಕತೆ ಎಂದು ರೈತ ಮುಖಂಡರು ಪಟ್ಟು ಹಿಡಿದು ಕುಳಿತಿದ್ದಾರೆ. (ಏಜೆನ್ಸೀಸ್)