ಕರ್ನಾಟಕ ಸಂಘದ ಪುಸ್ತಕ ಬಹುಮಾನಗಳ ಘೋಷಣೆ

karnataka sanga book award
ಕರ್ನಾಟಕ ಸಂಘದ ಅಧ್ಯಕ್ಷ ಎಂ.ಎನ್.ಸುಂದರರಾಜ್ ಮಾತನಾಡಿದರು. ಸಂಘದ ಕೋಶಾಧ್ಯಕ್ಷ ಎಚ್.ಡಿ.ಮೋಹನಶಾಸ್ತ್ರಿ, ಸದಸ್ಯರಾದ ಡಾ. ಎಸ್.ನಾಗಮಣಿ, ಕೆ.ಎಸ್.ಚೇತನ್, ವಿನಯ್ ಶಿವಮೊಗ್ಗ ಸುದ್ದಿಗೋಷ್ಠಿಯಲ್ಲಿದ್ದರು.
Published on

ಶಿವಮೊಗ್ಗ: ವಿಮರ್ಶಕ ಡಾ. ರಹಮತ್ ತರಿಕೆರೆ ಅವರ ಪುಸ್ತಕ ಸೇರಿದಂತೆ 2023ನೇ ಸಾಲಿನ ಕನ್ನಡ ಸಾಹಿತ್ಯ ಪ್ರಕಾರಗಳಿಗೆ ಕರ್ನಾಟಕ ಸಂಘದ ಪುಸ್ತಕ ಬಹುಮಾನಗಳ ಘೋಷಣೆಯಾಗಿದ್ದು ಪ್ರಶಸ್ತಿಯು ತಲಾ 10 ಸಾವಿರ ರೂ. ನಗದು ಪುರಸ್ಕಾರ ಮತ್ತು ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ ಎಂದು ಕರ್ನಾಟಕ ಸಂಘದ ಅಧ್ಯಕ್ಷ ಎಂ.ಎನ್.ಸುಂದರರಾಜ್ ಹೇಳಿದರು.

2023ರಲ್ಲಿ ಪ್ರಕಟವಾದ ಕನ್ನಡ ಸಾಹಿತ್ಯದ ವಿವಿಧ ಪ್ರಕಾರಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ರಾಜ್ಯದ ವಿವಿಧೆಡೆಯಿಂದ 900ಕ್ಕೂ ಅಧಿಕ ಅರ್ಜಿಗಳು ಬಂದಿದ್ದು ಅವುಗಳಲ್ಲಿ 12 ಪುಸ್ತಕಗಳನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿ ಪ್ರದಾನ ಸಮಾರಂಭವು ಸೆ.22ರಂದು ಕರ್ನಾಟಕ ಸಂಘದಲ್ಲಿ ನಡೆಯಲಿದೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಅಂದು ಸಂಜೆ 4ಕ್ಕೆ ಲೇಖಕರೊಂದಿಗೆ ಸಂವಾದ ಕಾರ್ಯಕ್ರಮ ನಡೆಯಲಿದೆ. ಸಂಜೆ 5.30ಕ್ಕೆ ನಡೆಯುವ ಪುಸ್ತಕ ಬಿಡುಗಡೆ ಸಮಾರಂಭಕ್ಕೆ ಕುವೆಂಪು ವಿಶ್ವವಿದ್ಯಾಲಯ ಕುಲಪತಿ ಡಾ. ಶರತ್ ಅನಂತಮೂರ್ತಿ ಮುಖ್ಯ ಅತಿಥಿಯಾಗಿದ್ದಾರೆ. ಸಂಘದ ಕಾರ್ಯಕಾರಿ ಸಮಿತಿ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಹಾಜರಿರುವರು ಎಂದು ಹೇಳಿದರು. ಸಂಘದ ಕೋಶಾಧ್ಯಕ್ಷ ಎಚ್.ಡಿ.ಮೋಹನಶಾಸ್ತ್ರಿ, ಸದಸ್ಯರಾದ ಡಾ. ಎಸ್.ನಾಗಮಣಿ, ಕೆ.ಎಸ್.ಚೇತನ್, ವಿನಯ್ ಶಿವಮೊಗ್ಗ ಸುದ್ದಿಗೋಷ್ಠಿಯಲ್ಲಿದ್ದರು.

14ರಂದು ತಿಂಗಳ ಅತಿಥಿ ಕಾರ್ಯಕ್ರಮ
ಕರ್ನಾಟಕ ಸಂಘದಲ್ಲಿ ಸೆ.14ರಂದು ತಿಂಗಳ ಅತಿಥಿ ಕಾರ್ಯಕ್ರಮಕ್ಕೆ ಸಾಹಿತಿ, ನಿವೃತ್ತ ಡಿಜಿಪಿ ಡಿ.ವಿ.ಗುರುಪ್ರಸಾದ್ ಅವರು ಪಾಲ್ಗೊಳ್ಳುವರು. ವೃತ್ತಿ ಜೀವನದ ರೋಚಕ ಘಟನೆಗಳು ಕುರಿತು ಸಂಜೆ 5.3ಕ್ಕೆ ವಿಶೇಷ ಉಪನ್ಯಾಸ ನೀಡುವರು. ಸಂಘದ ಅಧ್ಯಕ್ಷ ಎಂ.ಎನ್.ಸುಂದರರಾಜ್ ಅಧ್ಯಕ್ಷತೆ ವಹಿಸುವರು ಎಂದು ಸಂಘದ ಗೌರವ ಕಾರ್ಯದರ್ಶಿ ಪ್ರೊ. ಎಂ.ಆಶಾಲತಾ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net